ಮೈಸೂರು: ದಿನೇ ದಿನೇ ಕೊರೊನಾ ಸೋಂಕಿತರ ಹಾಗೂ ಸಾವಿನ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಜನಸಂದಣಿ ಹೆಚ್ಚಾಗಿ ಅಪಾಯ ಎದುರಾಗದಂತೆ ಜಿಲ್ಲಾಡಳಿತ ಸಾಕಷ್ಟು ಜಾಗೃತಿ ವಹಿಸಿದೆ.
ಕೊರೊನಾ ಮುಂಜಾಗೃತಾ ಕ್ರಮವಾಗಿ ಮಾರುಕಟ್ಟೆ ಸ್ಥಳಾಂತರ ಗೌರಿ-ಗಣೇಶ ಹಬ್ಬಕ್ಕೆ ಕೇವಲ ಇನ್ನೆರಡು ದಿನಗಳ ಬಾಕಿ ಇದ್ದು, ಹೂ-ಖರೀದಿಗೆ ಜನ ಮುಗಿ ಬೀಳುತ್ತಿದ್ದಾರೆ. ಇದರಿಂದ ಜನಸಂದಣಿ ಹೆಚ್ಚಾಗಲಿದೆ ಎಂಬ ಉದ್ದೇಶದಿಂದ ದೇವರಾಜ ಮಾರುಕಟ್ಟೆಯ ಹೂವಿನ ವ್ಯಾಪಾರ ಕೇಂದ್ರವನ್ನ ಇಂದಿನಿಂದ ನಾಲ್ಕು ದಿನಗಳವರೆಗೆ ಜೆ.ಕೆ.ಮೈದಾನಕ್ಕೆ ಸ್ಥಳಾಂತರ ಮಾಡಲಾಗಿದೆ.
ಜೆ.ಕೆ.ಮೈದಾನಕ್ಕೆ ಹೂವಿನ ಮಾರುಕಟ್ಟೆ ಶಿಪ್ಟ್ ಹಬ್ಬದ ಖರೀದಿ ಭರಾಟೆಯಲ್ಲಿ ದೇವರಾಜ ಮಾರುಕಟ್ಟೆಗೆ ಕಾಲಿಡಲು ಜಾಗವಿಲ್ಲದಷ್ಟು ಜನ ಸೇರುತ್ತಾರೆ. ಕೊರೊನಾ ಬಗ್ಗೆ ಎಷ್ಟೇ ಜಾಗೃತಿ ಮೂಡಿಸಿದರೂ ಜನರು ಮಾತ್ರ ಡೋಂಟ್ ಕೇರ್ ಎನ್ನುತ್ತಿದ್ದಾರೆ. ಇದರಿಂದ ಜನರಿಗೆ ಹಾಗೂ ಹೂವಿನ ವ್ಯಾಪಾರಿಗಳಿಗೆ ಅನುಕೂಲವಾಗಲಿ ಎಂಬ ಉದ್ದೇಶದಿಂದ ಜೆ.ಕೆ.ಮೈದಾನಕ್ಕೆ ಹೂವಿನ ವ್ಯಾಪಾರವನ್ನು ಸ್ಥಳಾಂತರ ಮಾಡಲಾಗಿದೆ.
ಮೊದಲ ದಿನ ಜನಸಂದಣಿ ಕಡಿಮೆ ಇದ್ದು, ಗುರುವಾರ ಹಾಗೂ ಶುಕ್ರವಾರ ಜೆ.ಕೆ.ಮೈದಾನ ಫುಲ್ ರಶ್ ಆಗಲಿದೆ. ಈಗಾಗಲೇ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದ್ದು, ಸಾಮಾಜಿಕ ಅಂತರದಡಿ ವ್ಯಾಪಾರ ವಹಿವಾಟು ನಡೆಸುವಂತೆ ಮೈಕ್ನಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ.