ಕರ್ನಾಟಕ

karnataka

ETV Bharat / state

ಮೈಸೂರಿನಲ್ಲಿ ಕೊರೊನಾ ಹೆಚ್ಚಳ: ಜಿಲ್ಲಾ ಉಸ್ತುವಾರಿ ಸಚಿವರಿಂದ ನಾಳೆ ಸಭೆ - ಸೋಂಕಿತರ ಸಂಖ್ಯೆ

ಬೆಂಬಿಡದೇ ಕಾಡುತ್ತಿರುವ ಮಹಾಮಾರಿ ಕೊರೊನಾದಿಂದ ಮೈಸೂರಿನಲ್ಲಿ ಸಾವುಗಳ ಸಂಖ್ಯೆ ಹೆಚ್ಚಾಗುತ್ತಿದ್ದು ಈ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್​ ನಾಳೆ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ.

Corona Increase in Mysore
ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್​

By

Published : Aug 29, 2020, 7:44 PM IST

ಮೈಸೂರು:ಕಳೆದ ಮೂರು ದಿನಗಳಿಂದ ಮೈಸೂರಿನಲ್ಲಿ ಸೋಂಕಿತರ ಸಂಖ್ಯೆ ಮತ್ತು ಸಾವಿನ ಸಂಖ್ಯೆ ಹೆಚ್ಚಾಗುತ್ತಿದ್ದು, ಈ ಬಗ್ಗೆ ಅಧಿಕಾರಗಳ ಸಭೆ ನಡೆಸುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ತಿಳಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು ಕಳೆದ ಮೂರು ದಿನಗಳಿಂದ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಹಾಗೂ ಸಾವಿನ ಸಂಖ್ಯೆ ಹೆಚ್ಚಾಗಿದ್ದು, ಈ ಬಗ್ಗೆ ನಾಳೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಏನೆಲ್ಲ ಕ್ರಮ ಕೈಗೊಳ್ಳಬೇಕೆಂಬುದನ್ನು ಚರ್ಚಿಸುವುದಾಗಿ ತಿಳಿಸಿದರು.

ಕೆಲವು ದಿನಗಳಿಂದ ಅಧಿಕಾರಿ ಮತ್ತು ವೈದ್ಯರುಗಳ ನಡುವೆ ಸಮನ್ವಯದ ಕೊರತೆ ಉಂಟಾಗಿತ್ತು. ಅದನ್ನು ಸರಿಪಡಿಸುವ ಕೆಲಸ ಮಾಡಲಾಗಿದೆ. ವೈದ್ಯರ ಬೇಡಿಕೆಯಂತೆ ತಿಂಗಳಲ್ಲಿ 2-3 ದಿನಗಳ ರಜೆ ಬೇಕು ಎಂದು ಕೇಳಿದ್ದಾರೆ. ಈ ಬಗ್ಗೆ ಚರ್ಚಿಸಬೇಕು.

ವೈದ್ಯರು ರಜೆ ಪಡೆದ ನಂತರ ನೆಮ್ಮದಿಯಾಗಿ ಕೆಲಸ ಮಾಡಲು ಅನುಕೂಲವಾಗುತ್ತದೆ. ಇವೆಲ್ಲವುಗಳ ಬಗ್ಗೆ ನಾಳಿನ ಸಭೆಯಲ್ಲಿ ಚರ್ಚೆ ಮಾಡಲಾಗುತ್ತದೆ. ಹೆಚ್ಚಾಗಿರುವ ಸೋಂಕಿತ ಪ್ರಕರಣ ಹಾಗೂ ಸಾವಿನ ಪ್ರಕರಣಗಳನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಎಲ್ಲ ರೀತಿಯ ಕ್ರಮ ಕೈಗೊಳ್ಳಲಾಗುತ್ತೆ ಎಂದರು.

ABOUT THE AUTHOR

...view details