ಮೈಸೂರು:ಗ್ರಾಮ ಪಂಚಾಯತ್ ಅಧಿಕಾರಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆ ಪಂಚಾಯತ್ ಕಚೇರಿಯನ್ನು ಸೀಲ್ ಡೌನ್ ಮಾಡಿರುವ ಘಟನೆ ಪಿರಿಯಾಪಟ್ಟಣ ತಾಲೂಕಿನ ಬೆಟ್ಟದಪುರ ಗ್ರಾಮದಲ್ಲಿ ನಡೆದಿದೆ.
ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಬೆಟ್ಟದಪುರ ಗ್ರಾಮ ಪಂಚಾಯತ್ ಅಧಿಕಾರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಆರೋಗ್ಯ ಅಧಿಕಾರಿಗಳು ಗ್ರಾಮ ಪಂಚಾಯತ್ ಕಚೇರಿಯನ್ನು ಸ್ಯಾನಿಟೈಸ್ ಮಾಡಿ, ಬ್ಯಾರಿಕೇಡ್ ಹಾಕಿ ಸೀಲ್ ಡೌನ್ ಮಾಡಿದ್ದಾರೆ. ಇವರ ಪ್ರಥಮ ಸಂಪರ್ಕದಲ್ಲಿದ್ದ 4 ಜನ ನೌಕರರನ್ನು ಹೋಮ್ ಕ್ವಾರಂಟೈನ್ ಮಾಡಲಾಗಿದೆ.
ಗ್ರಾಮ ಪಂಚಾಯತ್ ಅಧಿಕಾರಿಗೆ ಕೊರೊನಾ: ಕಚೇರಿ ಸೀಲ್ ಡೌನ್ - Mysore latest news
ಗ್ರಾಮ ಪಂಚಾಯತ್ ಅಧಿಕಾರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಆರೋಗ್ಯ ಅಧಿಕಾರಿಗಳು ಗ್ರಾಮ ಪಂಚಾಯತ್ ಕಚೇರಿಯನ್ನು ಸ್ಯಾನಿಟೈಸ್ ಮಾಡಿ, ಬ್ಯಾರಿಕೇಡ್ ಹಾಕಿ ಸೀಲ್ ಡೌನ್ ಮಾಡಿದ್ದಾರೆ.
Seal down
ಕಳೆದ ವಾರ ಗ್ರಾಮ ಪಂಚಾಯತ್ ಸಾಮಾನ್ಯ ಸಭೆ ನಡೆದಿದ್ದು, ಆ ದಿನ ಸಭೆಗೆ ಹಾಜರಾಗಿದ್ದ ಅಧ್ಯಕ್ಷರು, ಅಧಿಕಾರಿಗಳು ಮತ್ತು ಸದಸ್ಯರನ್ನು ಸಹ ಹೋಮ್ ಕ್ವಾರಂಟೈನ್ನಲ್ಲಿ ಇರಿಸಲಾಗಿದೆ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ. ನಾಗೇಶ್ ತಿಳಿಸಿದ್ದಾರೆ.