ಮೈಸೂರು: ಹುಣಸೂರಿನ ಶಾಸಕ ಹೆಚ್.ಪಿ.ಮಂಜುನಾಥ್ ಹಾಗೂ ಕುಟುಂಬದವರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದ್ದು, ಎಲ್ಲರೂ ಸ್ವಯಂ ಕ್ವಾರಂಟೈನ್ಗೆ ಒಳಗಾಗಿದ್ದಾರೆ.
ಹುಣಸೂರು ಶಾಸಕ ಮಂಜುನಾಥ್ಗೂ ತಗುಲಿದ ಕೊರೊನಾ - ಶಾಸಕ ಎಚ್.ಪಿ ಮಂಜುನಾಥ್ ಕ್ವಾರಂಟೈನ್
ಹುಣಸೂರಿನ ಕಾಂಗ್ರೆಸ್ ಶಾಸಕ ಹೆಚ್.ಪಿ.ಮಂಜುನಾಥ್ ಹಾಗೂ ಅವರ ಕುಟುಂಬದವರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ.
HP manjunath
ಹುಣಸೂರಿನ ಕಾಂಗ್ರೆಸ್ ಶಾಸಕ ಹೆಚ್.ಪಿ.ಮಂಜುನಾಥ್ ಹಾಗೂ ಅವರ ಪತ್ನಿ, ಪುತ್ರಿ, ತಮ್ಮನ ಮಗಳು ಹಾಗೂ ಕಚೇರಿಯ ಸಿಬ್ಬಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಹಿನ್ನಲೆಯಲ್ಲಿ ಎಲ್ಲರೂ ಸ್ವಯಂ ಕ್ವಾರಂಟೈನ್ಗೆ ಒಳಗಾಗಿದ್ದಾರೆ.
ಇನ್ನು ವೈದ್ಯರ ಸಲಹೆ ಮೇರೆಗೆ ಒಂದು ವಾರಗಳ ಕಾಲ ನಾನು ಸ್ವಯಂ ಕ್ವಾರಂಟೈನ್ಗೆ ಒಳಗಾಗಿದ್ದೇನೆ. ನನ್ನ ಸಂಪರ್ಕದಲ್ಲಿರುವ ಎಲ್ಲರೂ ಸ್ವಯಂ ಕ್ವಾರಂಟೈನ್ ಆಗುವಂತೆ ಶಾಸಕರು ಮನವಿ ಮಾಡಿದ್ದಾರೆ.