ಕರ್ನಾಟಕ

karnataka

ETV Bharat / state

ಜಿಲ್ಲೆಯ ಗಡಿ ಭಾಗದಲ್ಲಿ ಕೇರಳ ಪ್ರವಾಸಿಗರಿಗೆ ಕೊರೊನಾ ಟೆಸ್ಟ್ ಕಡ್ಡಾಯ: ಮೈಸೂರು ಎಸ್​ಪಿ‌ - Test Mandatory at the border

ಹೆಚ್.ಡಿ.ಕೋಟೆ ತಾಲೂಕಿನ ಬಾವಲಿ ಚೆಕ್ ಪೋಸ್ಟ್​ನಲ್ಲಿ ಕೇರಳದಿಂದ ಬರುವ ಪ್ರವಾಸಿಗರಿಗೆ ಕಡ್ಡಾಯವಾಗಿ ಸ್ಥಳದಲ್ಲಿ ಆರ್​ಟಿಪಿಸಿಆರ್ ಟೆಸ್ಟ್ ಮಾಡಲಾಗುತ್ತಿದೆ. ಈ ಸಂಬಂಧ ವಯನಾಡು ಎಸ್​ಪಿ ಅರವಿಂದ ಅವರೊಂದಿಗೆ ಮಾತುಕತೆ ನಡೆಸಿದ್ದೇವೆ ಎಂದು ಮೈಸೂರು ಎಸ್ಪಿ ತಿಳಿಸಿದ್ದಾರೆ.

ಎಸ್​ಪಿ‌ ಸಿ.ಬಿ.ರಿಷ್ಯಂತ್
ಎಸ್​ಪಿ‌ ಸಿ.ಬಿ.ರಿಷ್ಯಂತ್

By

Published : Mar 18, 2021, 3:11 PM IST

ಮೈಸೂರು:ಕೊರೊನಾ ಎರಡನೇ ಅಲೆಯ ಆರ್ಭಟ ಹೆಚ್ಚಾಗುತ್ತಿರುವುದರಿಂದ ಹೆಚ್.ಡಿ.ಕೋಟೆ ತಾಲೂಕಿನ ಗಡಿ ಭಾಗದಿಂದ ಬರುವ ಕೇರಳ ಪ್ರವಾಸಿಗರಿಗೆ ಕೋವಿಡ್ -19 ಟೆಸ್ಟ್ ಕಡ್ಡಾಯ ಮಾಡಲಾಗಿದೆ ಎಂದು ಜಿಲ್ಲಾ ಪೊಲೀಸ್​​ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್ ಹೇಳಿದರು.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮೈಸೂರು ಜಿಲ್ಲೆ ಸಂಪರ್ಕಿಸುವ ಎಲ್ಲಾ ಗಡಿಗಳ ಚೆಕ್ ಪೋಸ್ಟ್​ಗಳಲ್ಲಿ ವಾಹನಗಳ ತಪಾಸಣೆ ಹಾಗೂ ವ್ಯಕ್ತಿಗಳ ಕೊರೊನಾ ವರದಿ ಕೇಳುತ್ತಿದ್ದೇವೆ. ‌ಹೆಚ್.ಡಿ.ಕೋಟೆ ತಾಲೂಕಿನ ಬಾವಲಿ ಚೆಕ್ ಪೋಸ್ಟ್​ನಲ್ಲಿ ಕೇರಳದಿಂದ ಬರುವ ಪ್ರವಾಸಿಗರಿಗೆ ಕಡ್ಡಾಯವಾಗಿ ಸ್ಥಳದಲ್ಲಿ ಆರ್​ಟಿಪಿಸಿಆರ್ ಟೆಸ್ಟ್ ಮಾಡಲಾಗುತ್ತಿದೆ. ಈ ಸಂಬಂಧ ವಯನಾಡು ಎಸ್​ಪಿ ಅರವಿಂದ ಅವರೊಂದಿಗೆ ಮಾತುಕತೆ ನಡೆಸಿದ್ದೇವೆ ಎಂದರು.

ಮಾಧ್ಯಮಗಳೊಂದಿಗೆ ಮಾತನಾಡಿದ ಪೊಲೀಸ್​​ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್

ಬೆಂಗಳೂರು, ಮಂಡ್ಯ, ಕೊಡಗು, ಹಾಸನ, ಚಾಮರಾಜನಗರ ಜಿಲ್ಲೆಗಳಿಂದ ಬರುವವರಿಗೆ ಯಾವುದೇ ನಿರ್ಬಂಧ ಹೇರಿಲ್ಲ. ಆಯಾ ಗಡಿ ಭಾಗದಲ್ಲಿ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ಇದನ್ನೂ ಓದಿ..ಸಿಡಿ ಸೂತ್ರಧಾರ ನಾನಲ್ಲ.. ನನ್ನದೇನೂ‌ ಪಾತ್ರವಿಲ್ಲ; ಆರೋಪಿ ಭವಿತ್

ABOUT THE AUTHOR

...view details