ಮೈಸೂರು: ವೈದ್ಯೆಯೊಬ್ಬರಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ, ತಿ.ನರಸೀಪುರ ತಾಲೂಕಿನ ಸಾರ್ವಜನಿಕ ಆಸ್ಪತ್ರೆಯ ಒಪಿಡಿಯನ್ನು ಎರಡು ದಿನಗಳ ಕಾಲ ಬಂದ್ ಮಾಡಲಾಗಿದೆ.
ಸಾರ್ವಜನಿಕ ಆಸ್ಪತ್ರೆಯ ಪ್ರಸೂತಿ ವೈದ್ಯರಿಗೆ ಕೊರೊನಾ ಪಾಸಿಟಿವ್ ಬಂದಿರುವುದರಿಂದ 2 ದಿನಗಳ ಕಾಲ ಒಪಿಡಿ ಬಂದ್ ಮಾಡಲು ಆಸ್ಪತ್ರೆ ಆಡಳಿತ ಮಂಡಳಿ ನಿರ್ಧರಿಸಿದೆ.