ಮೈಸೂರು:ಇಂದು 100 ಹೊಸ ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಪ್ರಕರಣಗಳ ಸಂಖ್ಯೆ 47,931ಕ್ಕೇರಿದೆ.
ಮೈಸೂರಿನಲ್ಲಿ ಇಂದು 100 ಮಂದಿಗೆ ಕೊರೊನಾ: 165 ಮಂದಿ ಗುಣಮುಖ - ಮೈಸೂರು ಕೊರೊನಾ ಪಾಸಿಟಿವ್ ಪ್ರಕರಣಗಳು
ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಗಣನೀಯ ಪ್ರಮಾಣದಲ್ಲಿ ಇಳಿಕೆಯಾಗುತ್ತಿದ್ದು, ಮೈಸೂರಲ್ಲೂ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಮುಖವಾಗ್ತಿದೆ.
ಮೈಸೂರು
ಇಂದು 165 ಮಂದಿ ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದು, ಇದುವರೆಗೂ 45,455 ಮಂದಿ ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.
ಇನ್ನು ಜಿಲ್ಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 1,515 ಇದೆ. ಇಂದು ಕೊರೊನಾಗೆ ಇಬ್ಬರು ಬಲಿಯಾಗಿದ್ದು, ಇದುವರೆಗೆ 961 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ.