ಮೈಸೂರು: ಇಂದು ಜಿಲ್ಲೆಯಲ್ಲಿ ಮತ್ತೆ ಇಬ್ಬರಿಗೆ ಕೊರೊನಾ ಸೋಂಕು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 88 ಕ್ಕೆ ಏರಿದೆ.
ಜುಬಿಲಂಟ್ ಕಾರ್ಖಾನೆಯ ಮೊದಲ ಸೋಂಕಿತ ವ್ಯಕ್ತಿ ಪಿ-52 ಅವರ ದ್ವಿತೀಯ ಸಂಪರ್ಕದಿಂದ ಮತ್ತೆ ಒಬ್ಬರಿಗೆ ಮತ್ತು ಪಿ-383 ರೋಗಿಯಿಂದ ಮತ್ತೊಬ್ಬರಿಗೆ ಕೊರೊನಾ ಸೋಂಕು ಹರಡಿರುವುದು ದೃಢಪಟ್ಟಿದೆ.
ಮೈಸೂರಿನಲ್ಲಿ ಮತ್ತೆ ಇಬ್ಬರಿಗೆ ಕೊರೊನಾ ಪತ್ತೆ: 88 ಕ್ಕೆ ಏರಿದ ಸೋಂಕಿತರ ಸಂಖ್ಯೆ - ಮೈಸೂರಿನಲ್ಲಿ ಮತ್ತೆ ಇಬ್ಬರಿಗೆ ಕೊರೊನಾ ಪತ್ತೆ
ಇಂದಿಗೆ ಮೈಸೂರು ಜಿಲ್ಲೆಯಲ್ಲಿ ಇಂದು ಮತ್ತಿಬ್ಬರಿಗೆ ಕೊರೊನಾ ಪಾಸಿಟಿವ್ ಇರುವುದು ದೃಢವಾಗಿದೆ. ಈವರೆಗೆ 33 ಜನ ಆಸ್ಪತ್ರೆಯಿಂದ ಗುಣಮುಖರಾಗಿ ಮನೆಗೆ ಮರಳಿದ್ದರೆ, ಉಳಿದ 55 ಮಂದಿ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ತಿಳಿಸಿದ್ದಾರೆ.
ಮೈಸೂರಿನಲ್ಲಿ ಮತ್ತೆ ಇಬ್ಬರಿಗೆ ಕೊರೊನಾ ಪತ್ತೆ
88 ರೋಗಿಗಳಲ್ಲಿ 33 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ಮರಳಿದ್ದಾರೆ. ಉಳಿದ 55 ಜನ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ತಿಳಿಸಿದ್ದಾರೆ.