ಕರ್ನಾಟಕ

karnataka

By

Published : Mar 19, 2020, 4:21 AM IST

ETV Bharat / state

ಮೈಸೂರಿನಲ್ಲಿ ಕೊರೊನಾ ಭೀತಿ: ಬಾವುಲಿ ಚೆಕ್ ಪೋಸ್ಟ್​ನಲ್ಲಿ ತೀವ್ರ ತಪಾಸಣೆ

ಭಾರತದಲ್ಲಿ ಕೊರೊನಾ ವೈರಸ್ ಜನರಲ್ಲಿ ಅತಿ ಹೆಚ್ಚು ಭಯ ಉಂಟು ಮಾಡಿದ್ದು, ಕೆಲವು ಭಾಗಗಳಲ್ಲಿ ಜನರನ್ನು ಬಲಿ ತೆಗೆದುಕೊಂಡಿದೆ. ಹಾಗಾಗಿ ಮೈಸೂರು ಜಿಲ್ಲೆಯಲ್ಲಿ ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಅನೇಕ ಕಟ್ಟೆಚ್ಚರ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ.

coronation-phobia-in-mysore-intensive-inspection-at-bavuli-check-post
ಬಾವುಲಿ ಚೆಕ್ ಪೋಸ್ಟ್ ನಲ್ಲಿ ತೀವ್ರ ತಪಾಸಣೆ.

ಮೈಸೂರು: ಕೇರಳ ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕು ಪತ್ತೆಯಾಗಿರುವ ಹಿನ್ನಲೆ ಮೈಸೂರಿನ ಗಡಿ ಭಾಗಗಳಲ್ಲಿ ಕಟ್ಟೆಚ್ಚರ ವಹಿಸಿ ಚೆಕ್ ಪೋಸ್ಟ್​​ಗಳಲ್ಲಿ ಪ್ರತಿಯೊಬ್ಬರನ್ನು ತಪಾಸಣೆ ಮಾಡಲಾಗುತ್ತಿದೆ.

ಭಾರತದಲ್ಲಿ ಕೊರೊನಾ ವೈರಸ್ ಜನರಲ್ಲಿ ಅತಿ ಹೆಚ್ಚು ಭಯ ಉಂಟು ಮಾಡಿದ್ದು, ಕೆಲವು ಭಾಗಗಳಲ್ಲಿ ಜನರನ್ನು ಬಲಿ ತೆಗೆದುಕೊಂಡಿದೆ. ಹೀಗಾಗಿ ಜಿಲ್ಲೆಯಲ್ಲಿ ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಅನೇಕ ಕಟ್ಟೆಚ್ಚರ ಕ್ರಮಗಳನ್ನು ತೆಗೆದುಕೊಂಡಿದ್ದು, ಕೇರಳ ರಾಜ್ಯದಲ್ಲಿ ವೈರಸ್ ಸೋಂಕು ಪತ್ತೆಯಾಗಿದ್ದು, ಅಲ್ಲಿನ ಗಡಿ ಭಾಗಗಳಲ್ಲಿ ತೀವ್ರ ನಿಗಾ ವಹಿಸಲಾಗಿದೆ. ಕೇರಳದಿಂದ ಬರುವ ಪ್ರತಿಯೊಬ್ಬರನ್ನು ತಪಾಸಣೆ ಮಾಡಿ, ಅದರ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ.

ಬಾವುಲಿ ಚೆಕ್ ಪೋಸ್ಟ್ ನಲ್ಲಿ ತೀವ್ರ ತಪಾಸಣೆ

ಎಚ್.ಡಿ ಕೋಟೆ ತಾಲೂಕಿನ ಬಾವಲಿ ಚೆಕ್ ಪೋಸ್ಟ್ ಕೇರಳಕ್ಕೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಓಡಾಡುವ ಪ್ರತಿಯೊಬ್ಬರನ್ನು ತಪಾಸಣೆಗೆ ಒಳಪಡಿಸಲಾಗುತ್ತಿದ್ದು, ಚೆಕ್ ಪೋಸ್ಟ್ ಬಳಿಯೆ ವೈದ್ಯಕೀಯ ಸಿಬ್ಬಂದಿಗಳು, ಆರೋಗ್ಯ ಅಧಿಕಾರಿ ಇದ್ದು, ತೀವ್ರ ನಿಗಾ ಇರಿಸಿ, ಜಾಗೃತಿ ಮೂಡಿಸುವ ಕರಪತ್ರಗಳನ್ನು ಹಂಚುತ್ತಿದ್ದಾರೆ. ಇನ್ನೂ ಎಚ್.ಡಿ.ಕೋಟೆ ಸರ್ಕಾರಿ ಆಸ್ಪತ್ರೆಗಳಲ್ಲಿ 3 ಐಸೋಲೇಷನ್ ವಾರ್ಡ್​ಗಳನ್ನು ಮುನ್ನೆಚ್ಚರಿಕಾ ಕ್ರಮವಾಗಿ ತೆರೆಯಲಾಗಿದೆ.

ABOUT THE AUTHOR

...view details