ಮೈಸೂರು: ಚಿನ್ನ ಬಿಡಿಸಿಕೊಡುವುದಾಗಿ ನಂಬಿಸಿ ಎರಡು ಲಕ್ಷ ಪಡೆದು ವಂಚಿಸಿ ಪರಾರಿಯಾಗಿದ್ದ ದಂಪತಿಯನ್ನು ಪೊಲೀಸರು ಬಂಧಿಸಿದ್ದಾರೆ.
ಮೈಸೂರು: ಚಿನ್ನ ಬಿಡಿಸಿಕೊಡುವುದಾಗಿ ನಂಬಿಸಿ ವಂಚಿಸಿದ ದಂಪತಿಯ ಬಂಧನ - mysore crime news
ಮೈಸೂರು ಚಿನ್ನ ಬಿಡಿಸಿಕೊಡುವುದಾಗಿ ನಂಬಿಸಿ ಎರಡು ಲಕ್ಷ ಪಡೆದು ವಂಚಿಸಿ ಪರಾರಿಯಾಗಿದ್ದ ದಂಪತಿಯನ್ನು ಪೊಲೀಸರು ಬಂಧಿಸಿದ್ದಾರೆ.
ದಂಪತಿ ಬಂಧನ
ಮೂಲತಃ ಗುಂಡ್ಲುಪೇಟೆ ತಾಲೂಕಿನ ಅಂಗಳ ಗ್ರಾಮದವನಾದ ಹಾಲಿ ಕೋಟೆಹುಂಡಿ ಗ್ರಾಮದಲ್ಲಿ ವಾಸವಾಗಿರುವ ಪ್ರಸಾದ್ ಹಾಗೂ ಭಾಗ್ಯ ಬಂಧಿತ ಆರೋಪಿಗಳು. ಆರೋಪಿಗಳನ್ನು ದಸ್ತಗಿರಿ ಮಾಡಿ ಎರಡು ಲಕ್ಷ ನಗದು ಹಣ, ಒಂದು ಬಜಾಜ್ ಪಲ್ಸರ್ ಮೋಟಾರ್ ಸೈಕಲ್, ಒಂದು ಮೊಬೈಲ್ ಫೋನ್ ವಶಪಡಿಸಿಕೊಂಡಿದ್ದು, ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಇನ್ನು ಈ ಸಂಬಂಧ ಇಲವಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.