ಕರ್ನಾಟಕ

karnataka

ETV Bharat / state

ಕೋವಿಡ್​ ನಿಯಮ ಮತ್ತಷ್ಟು ಸಡಿಲಿಕೆ ಕಾರಣಕ್ಕೆ ಕನ್ನಡ ಸಾಹಿತ್ಯ ಸಮ್ಮೇಳನ ಮುಂದೂಡಿಕೆ: ಲಿಂಬಾವಳಿ - Minister aravind limbavali

ಕೋವಿಡ್-19 ನಿಯಮ ಮತ್ತಷ್ಟು ಸಡಿಲಿಕೆಯಾಗುವ ಹಿನ್ನೆಲೆಯಲ್ಲಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಮುಂದೂಡಲಾಗಿದೆ ಎಂದು ಸಚಿವ ಅರವಿಂದ ಲಿಂಬಾವಳಿ ಹೇಳಿದರು.

Minister aravind limbavali
ಸಚಿವ ಅರವಿಂದ ಲಿಂಬಾವಳಿ

By

Published : Feb 5, 2021, 9:44 PM IST

ಮೈಸೂರು: ಫೆಬ್ರವರಿ 28ರ ನಂತರ ಕೋವಿಡ್-19 ನಿಯಮ ಮತ್ತಷ್ಟು ಸಡಿಲಿಕೆಯಾಗುವ ಹಿನ್ನೆಲೆಯಲ್ಲಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಮುಂದೂಡಲಾಗಿದೆ ಎಂದು ಅರಣ್ಯ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಅರವಿಂದ ಲಿಂಬಾವಳಿ ಹೇಳಿದರು.

ಸರ್ಕಾರಿ ಅತಿಥಿ ಗೃಹದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಾಹಿತ್ಯ ಸಮ್ಮೇಳನದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನ ಸೇರುತ್ತಾರೆ. ಜೊತೆಗೆ ಸಮ್ಮೇಳನದ ತಯಾರಿ ಕೂಡ ನಡೆದಿಲ್ಲ. ಹಿನ್ನೆಲೆಯಲ್ಲಿ ಕೊರೊನಾ ನಿಯಮ ಪಾಲನೆ ಮಾಡುವುದು ಕಷ್ಟ. ಈ ಕಾರಣಕ್ಕಾಗಿ ಸಮ್ಮೇಳನವನ್ನು ಮುಂದೂಡಲು ನಿರ್ಧಾರ ಮಾಡಲಾಗಿದೆ ಎಂದರು.

ಸಚಿವ ಅರವಿಂದ ಲಿಂಬಾವಳಿ

ಮಾರ್ಚ್ 9ರಂದು ಸಭೆ ನಡೆಸಿ, ಅಖಿಲ ಭಾರತ ಸಾಹಿತ್ಯ ಸಮ್ಮೇಳನದ ದಿನಾಂಕವನ್ನು ನಿಗದಿಪಡಿಸಲಾಗುವುದು. ಅಲ್ಲದೆ, ಕೊರೊನಾ ನಿಯಮ ಮತ್ತಷ್ಟು ಸಡಿಲಿಕೆಯಾಗುವುದರಿಂದ ಜನರಿಗೆ ಅನುಕೂಲವಾಗಲಿದೆ. ಕೊರೊನಾ ಹರಡದಂತೆ ಎಚ್ಚರಿಕೆ ವಹಿಸುವುದು ಆದ್ಯತೆ ವಹಿಸಿ, ಕಾರ್ಯಕ್ರಮ ರೂಪಿಸಲಾಗುವುದು ಎಂದು ತಿಳಿಸಿದರು.

ಮಡಿಕೇರಿಯಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರೊಂದಿಗೆ ಕಾರ್ಯಕ್ರಮದಲ್ಲಿ ಭಾಗವಹಿಸಲು ತೆರಳುವುದಾಗಿ ಇದೇ ಸಂದರ್ಭದಲ್ಲಿ ಹೇಳಿದರು.

ABOUT THE AUTHOR

...view details