ಮೈಸೂರು:ಇಂದಿನಿಂದ 10 ದಿನಗಳವರೆಗೆ ಕಠಿಣ ಲಾಕ್ಡೌನ್ ಜಾರಿ ಹಿನ್ನೆಲೆಯಲ್ಲಿ ಸಾಂಸ್ಕೃತಿಕ ನಗರಿ ಮೈಸೂರು ಬಿಕೋ ಎನ್ನುತ್ತಿದೆ. ನಗರದ ದೇವರಾಜ ಮಾರುಕಟ್ಟೆ ಮುಂಭಾಗ ಹಾಗೂ ರಸ್ತೆಗಳು ಭಣಗುಡುತ್ತಿವೆ.
ಕಠಿಣ ಲಾಕ್ಡೌನ್: ಮೈಸೂರು ನಗರ ಸಂಪೂರ್ಣ ಸ್ತಬ್ಧ
ಇಂದಿನಿಂದ 10 ದಿನಗಳವರೆಗೆ ಕಠಿಣ ಲಾಕ್ಡೌನ್ ಜಾರಿ ಹಿನ್ನೆಲೆಯಲ್ಲಿ ನಗರ ಸಂಪೂರ್ಣ ಸ್ತಬ್ಧವಾಗಿದೆ.
ಮೈಸೂರು
ಕೊರೊನಾ ಎರಡನೇ ಅಲೆ ಹಾವಳಿ ಹೆಚ್ಚಾಗುತ್ತಿರುವುದರಿಂದ ಮೇ 29ರಿಂದ ಜೂನ್ 7ರವರೆಗೆ ಕಠಿಣ ಲಾಕ್ಡೌನ್ ಜಾರಿಗೊಳಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಹೀಗಾಗಿ ಅಂಗಡಿ-ಮುಂಗಟ್ಟುಗಳು ಬಂದ್ ಆಗಿವೆ. ಉಳಿದಂತೆ ಹಾಲು, ಹಾಪ್ ಕಾಮ್ಸ್, ಔಷಧಿ ಅಂಗಡಿಗಳು ಎಂದಿನಂತೆ ತೆರೆದಿವೆ.
ಪ್ರಮುಖ ರಸ್ತೆಗಳನ್ನು ಬ್ಯಾರಿಕೇಡ್ ಹಾಕಿ ವಾಹನಗಳಿಗೆ ನಿರ್ಬಂಧ ವಿಧಿಸಲಾಗಿದ್ದು, ಅನಗತ್ಯವಾಗಿ ತಿರುಗಾಡುವ ವಾಹನ ಸವಾರರಿಗೆ ಪೊಲೀಸರು ಬಿಸಿ ಮುಟ್ಟಿಸುತ್ತಿದ್ದಾರೆ.