ಕರ್ನಾಟಕ

karnataka

ETV Bharat / state

ಕೊರೊನಾ ಭೀತಿ:ಆಷಾಢ ಶುಕ್ರವಾರದಂದು ನಾಡ ಅಧಿದೇವತೆ ಚಾಮುಂಡೇಶ್ವರಿಗೆ ಸರಳ ಪೂಜೆ - ನಾಡ ಅಧಿದೇವತೆ ಚಾಮುಂಡೇಶ್ವರಿ

ಕೋವಿಡ್​ ಭೀತಿ ಹಿನ್ನೆಲೆ ನಾಡ ಅಧಿದೇವತೆ ಚಾಮುಂಡೇಶ್ವರಿಗೆ ಸರಳವಾಗಿ ಪೂಜೆ ಸಲ್ಲಿಸಲಾಗಿದೆ. ಪ್ರತಿ ವರ್ಷವೂ ಆಷಾಢ ಶುಕ್ರವಾರಗಳಂದು ಸಹಸ್ರಾರು ಜನ ಸೇರುತ್ತಿದ್ದರು. ಕೊರೊನಾ ಹರಡುವಿಕೆ ತಡೆಗಟ್ಟಲು ಸಾರ್ವಜನಿಕರ ಪ್ರವೇಶ ನಿರ್ಬಂಧ ವಿಧಿಸಲಾಗಿದೆ.

ನಾಡ ಅಧಿದೇವತೆ ಚಾಮುಂಡೇಶ್ವರಿಗೆ ಸರಳ ಪೂಜೆ
ನಾಡ ಅಧಿದೇವತೆ ಚಾಮುಂಡೇಶ್ವರಿಗೆ ಸರಳ ಪೂಜೆ

By

Published : Jul 16, 2021, 8:39 AM IST

ಮೈಸೂರು: ಕೊರೊನಾ ಭೀತಿ ಹಿನ್ನೆಲೆ ಆಷಾಢ ಶುಕ್ರವಾರದಂದು ನಾಡ ಅಧಿದೇವತೆ ಚಾಮುಂಡೇಶ್ವರಿಗೆ ಸಾಂಪ್ರದಾಯಿಕ ಹಾಗೂ ಸರಳವಾಗಿ ಪೂಜೆ ಸಲ್ಲಿಸಲಾಯಿತು. ಶ್ರೀ ಚಾಮುಂಡೇಶ್ವರಿ ಅಮ್ಮನವರಿಗೆ ರುದ್ರಾಭಿಷೇಕ, ಕುಂಕುಮಾಭಿಷೇಕ ಮಾಡಿ ವಿಶೇಷ ಅಲಂಕಾರದೊಂದಿಗೆ ಪೂಜೆ ಪುನಸ್ಕಾರ ನೆರವೇರಿಸಲಾಯಿತು.

ಚಾಮುಂಡಿ ಬೆಟ್ಟ ಸಂಪರ್ಕಿಸುವ ದಾರಿಗಳು ಬಂದ್!

ಪ್ರತಿ ವರ್ಷವೂ ಆಷಾಢ ಶುಕ್ರವಾರಗಳಂದು ಸಹಸ್ರಾರು ಜನ ಸೇರುತ್ತಿದ್ದರು. ಕೊರೊನಾ ಹರಡುವಿಕೆ ತಡೆಗಟ್ಟಲು ಸಾರ್ವಜನಿಕರ ಪ್ರವೇಶ ನಿರ್ಬಂಧ ವಿಧಿಸಲಾಗಿದೆ. ಶುಕ್ರವಾರ, ಶನಿವಾರ, ಭಾನುವಾರ ಪ್ರವೇಶ ನಿರ್ಬಂಧ ವಿಧಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಈ ಹಿನ್ನೆಲೆ ಚಾಮುಂಡಿಬೆಟ್ಟ ಸಂಪರ್ಕಿಸುವ ಎಲ್ಲ ದಾರಿಗಳನ್ನೂ ಕ್ಲೋಸ್ ಮಾಡಲಾಗಿದೆ. ಸಚಿವರು, ಗಣ್ಯರಿಗೆ ಮಾತ್ರ ಅವಕಾಶ ನೀಡಲಾಗಿದ್ದು, ಸಾರ್ವಜನಿಕರಿಗೆ ನಿರ್ಬಂಧ ವಿಧಿಸಲಾಗಿದೆ. ಇಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಸೇರಿ ಗಣ್ಯರು ಚಾಮುಂಡಿ ಬೆಟ್ಟಕ್ಕೆ ತೆರಳಲಿದ್ದಾರೆ.

ಚಾಮುಂಡಿ ದರ್ಶನ ಪಡೆಯಲಿರುವ ಚಾಲೆಂಜಿಂಗ್ ಸ್ಟಾರ್

ಹಲ್ಲೆ ಸೇರಿದಂತೆ ಕೆಲ ಪ್ರಕರಣಗಳಿಂದ ವಿವಾದಕ್ಕೆ ಗುರಿಯಾಗುತ್ತಿರುವ ನಟ ದರ್ಶನ್, ಇಂದು ಚಾಮುಂಡೇಶ್ವರಿ ದರ್ಶನ ಪಡೆಯಲಿದ್ದಾರೆ. ದೇವಿ ದರ್ಶನ ಪಡೆದು ಹಲ್ಲೆ ಪ್ರಕರಣಕ್ಕೆ ಸ್ಪಷ್ಟನೆ ನೀಡುವ ಸಾಧ್ಯತೆಯಿದೆ ಎನ್ನಲಾಗಿದೆ.

ಗುರುವಾರ ಸಂಜೆಯೇ ಬೆಂಗಳೂರಿನಿಂದ ಮೈಸೂರಿಗೆ ಆಗಮಿಸಿದ ದರ್ಶನ್, ಸಂದೇಶ್ ಪ್ರಿನ್ಸ್ ಮಾಲೀಕ, ಸಂದೇಶ್ ನಾಗರಾಜ್ ಪುತ್ರ ಸಂದೇಶ್ ಜೊತೆ ಮಾತುಕತೆ ನಡೆಸಿದ್ದಾರೆ.

ABOUT THE AUTHOR

...view details