ಕರ್ನಾಟಕ

karnataka

ETV Bharat / state

ಕೋವಿಡ್ ಆಸ್ಪತ್ರೆಗೆ ಅಗತ್ಯ ವಸ್ತುಗಳ ಕೊಡುಗೆ ನೀಡಿದ ಕೊರೊನಾ ಮುಕ್ತರು - ಮೈಸೂರು ಕೊರೊನಾ ಆಸ್ಪತ್ರೆಗೆ ಕೊಡುಗೆ ನೀಡಿದ ಗುಣಮುಖ ಸೋಂಕಿತರು

ಕೊರೊನಾ ಸೋಂಕಿನಿಂದ ಗುಣಮುಖರಾಗಿ ಮನೆಗೆ ಹೋಗುತ್ತಿರುವವರು ಜಿಲ್ಲಾ ಆಸ್ಪತ್ರೆಯ ಮುಖ್ಯಸ್ಥರ ಅನುಮತಿ ಪಡೆದು ಆಸ್ಪತ್ರೆಗೆ ಅಗತ್ಯವಾಗಿ ಬೇಕಾಗಿರುವ ವಸ್ತುಗಳನ್ನು ನೀಡಿ ಧನ್ಯತೆ ಮೆರೆದಿದ್ದಾರೆ.

Mysure
Mysure

By

Published : Jul 22, 2020, 12:40 PM IST

ಮೈಸೂರು: ಕೊರೊನಾ ಸೋಂಕಿನಿಂದ ಗುಣಮುಖರಾಗಿ ಮನೆಗೆ ಹೋಗುತ್ತಿರುವ ಅನೇಕರು ಕೋವಿಡ್ ಆಸ್ಪತ್ರೆಗೆ ಅಗತ್ಯವಾದ ಹಲವು ಉಪಕರಣಗಳನ್ನು ಕೊಡುಗೆಯಾಗಿ ನೀಡುವ ಮ‌ೂಲಕ ಮಾನವೀಯತೆ ಮೆರೆಯುತ್ತಿದ್ದಾರೆ.

ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆ ಜಿಲ್ಲೆಯ ಕೋವಿಡ್ ಆಸ್ಪತ್ರೆಗೆ ದಾಖಲಾಗಿ ಅಲ್ಲಿ 14ಕ್ಕೂ ಹೆಚ್ಚು ದಿನ ಚಿಕಿತ್ಸೆ ಪಡೆದು ಅನೇಕರು ಗುಣಮುಖರಾಗಿ ಮನೆಗೆ ತೆರಳುತ್ತಿದ್ದಾರೆ. ಗುಣಮುಖರಾಗಿ ಹೋಗುತ್ತಿರುವವರು ಕೊಡುಗೆಯಾಗಿ ಜಿಲ್ಲಾ ಆಸ್ಪತ್ರೆಯ ಮುಖ್ಯಸ್ಥರ ಅನುಮತಿ ಪಡೆದು ಆಸ್ಪತ್ರೆಗೆ ಅಗತ್ಯವಾಗಿ ಬೇಕಾಗಿರುವ ವಸ್ತುಗಳನ್ನು ನೀಡುತ್ತಿದ್ದಾರೆ.

ಇಲ್ಲಿಯವರೆಗೆ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾದವರು ಬಿಸಿ ನೀರು ಕಾಯಿಸಲು ವಾಟರ್ ಹೀಟರ್, 10 ಕ್ಕೂ ಹೆಚ್ಚು ಫ್ಲಾಸ್ಕ್ , ಸಣ್ಣ ಸಣ್ಣ ಗೀಸರ್, ಎನ್ -95 ಮಾಸ್ಕ್ ಗಳ ಜೊತೆಗೆ ಇತರ ಅಗತ್ಯ ವಸ್ತುಗಳನ್ನು ಕೊಡುಗೆಯಾಗಿ ನೀಡುತ್ತಿದ್ದಾರೆ.

ABOUT THE AUTHOR

...view details