ಮೈಸೂರು:ಪಕ್ಕದ ಕೇರಳದಲ್ಲಿ ಕೊರೊನಾ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಹೆಚ್.ಡಿ ಕೋಟೆ ತಾಲೂಕಿನ ಬಾವಲಿ ಚೆಕ್‌ಪೋಸ್ಟ್ ಬಳಿ ತೀವ್ರ ಎಚ್ಚರಿಕೆ ವಹಿಸಲಾಗಿದೆ.
ಎರಡು ಡೋಸ್ ವ್ಯಾಕ್ಸಿನ್/RT-PCR ಸರ್ಟಿಫಿಕೇಟ್ ಇದ್ದವರಿಗೆ ಮಾತ್ರ ರಾಜ್ಯ ಪ್ರವೇಶ - ಕೇರಳದಲ್ಲಿ ಹೆಚ್ಚಾದ ಕೋವಿಡ್ ಕೇಸ್'
ಕೇರಳದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾದ ಹಿನ್ನೆಲೆಯಲ್ಲಿ ಮೈಸೂರಿನ ಹೆಚ್.ಡಿ ಕೋಟೆಯ ಗಡಿ ಚೆಕ್ ಪೋಸ್ಟ್ಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.
ಕೇರಳ ರಾಜ್ಯದಲ್ಲಿ ಕಳೆದೆರಡು ದಿನಗಳಿಂದ ಕೋವಿಡ್ ಕೇಸ್ಗಳು 20 ಸಾವಿರ ಗಡಿ ದಾಟುತ್ತಿವೆ. ಇದರಿಂದ ಜಿಲ್ಲೆಯ ಜನರಲ್ಲಿ ಮತ್ತೆ ಆತಂಕ ಹೆಚ್ಚಾಗಿದೆ. ಈ ಸಂಬಂಧ ಕೇರಳದ ಗಡಿ ಭಾಗ ಬಾವಲಿ ಚೆಕ್‌ಪೋಸ್ಟ್‌ನಲ್ಲಿ ಎರಡು ಡೋಸ್ ವಾಕ್ಸಿನ್ ಪಡೆದವರಿಗೆ ಮಾತ್ರ ಜಿಲ್ಲೆಯ ಪ್ರವೇಶಕ್ಕೆ ಅವಕಾಶ ನೀಡಲಾಗಿದೆ. ಇದರ ಜೊತೆಗೆ ಆರ್ಟಿ-ಪಿಸಿಆರ್ ವರದಿ ನೆಗೆಟಿವ್ ಇದ್ದವರಿಗೆ ಮಾತ್ರ ರಾಜ್ಯ ಪ್ರವೇಶ ನೀಡಲಾಗುವುದು ಎಂದು ತಾಲೂಕು ಆರೋಗ್ಯಾಧಿಕಾರಿ ರವಿಕುಮಾರ್ ಹೇಳಿದರು.
ಪ್ರತಿದಿನ ಸಂಜೆ 6ರವರೆಗೂ ವಾಹನಗಳ ಸಂಖ್ಯೆ ನಮೂದಿಸಲಾಗುತ್ತಿದೆ. ಎಲ್ಲಾ ವಾಹನಗಳನ್ನು ತಪಾಸಣೆ ಮಾಡಿ ಬಿಡಲಾಗುತ್ತದೆ. ಸರ್ಕಾರ ಹಾಗೂ ಜಿಲ್ಲಾಡಳಿತದ ಸೂಚನೆಯಂತೆಯೆ ಕ್ರಮ ಕೈಗೊಳ್ಳುವುದು. ಇದರಲ್ಲಿ ಯಾವುದೇ ಬದಲಾವಣೆ ಇಲ್ಲ. ಸಂಶಯ ಬಂದರೆ ಸ್ಥಳದಲ್ಲೇ ಕೊರೊನಾ ತಪಾಸಣೆ ಮಾಡಿಸುತ್ತೇವೆ. ಈ ಬಾರಿ ಗಡಿಭಾಗದಲ್ಲಿ ಹಿಂದಿಗಿಂತ ಹೆಚ್ಚಿನ ಕ್ರಮ ಕೈಗೊಂಡಿದ್ದೇವೆ ಎಂದರು.