ಮೈಸೂರು:ಜಿಲ್ಲೆಯಲ್ಲಿ ಕೋವಿಡ್ ಸೋಂಕು ಹೆಚ್ಚಾಗಿದ್ದರಿಂದ ಕೋವಿಡ್ ಪರೀಕ್ಷೆಯನ್ನು ತೀವ್ರಗೊಳಿಸಬೇಕು, ಈ ನಿಟ್ಟಿನಲ್ಲಿ ಸೋಂಕಿತರ ಪ್ರಾಥಮಿಕ ಸಂಪರ್ಕಿತರನ್ನು ಕಡ್ಡಾಯವಾಗಿ ಪರೀಕ್ಷೆಗೊಳಪಡಿಸಬೇಕು ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಕೋವಿಡ್ ಪರೀಕ್ಷೆಗಳನ್ನು ಹೆಚ್ಚು ಮಾಡಬೇಕು: ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ - Covid tests
'ಸಾರ್ವಜನಿಕರು ಧೈರ್ಯವಾಗಿ ಬಂದು ಪರೀಕ್ಷೆ ಮಾಡಿಸಿಕೊಳ್ಳಲು ಪ್ರೇರೆಪಿಸುವ ನಿಟ್ಟಿನಲ್ಲಿ ಜಾಗೃತಿಗಾಗಿ ಪ್ರಚಾರ ಮಾಡಲು ಐಇಸಿ ಕಾರ್ಯಕ್ರಮಗಳನ್ನು ಹೆಚ್ಚಿಸಬೇಕು. ಪ್ರತಿವಾರ ಎಲ್ಲ ನೋಡಲ್ ಅಧಿಕಾರಿಗಳ ಸಭೆ ನಡೆಸಲಾಗುವುದು'
ಇಂದು ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ನೋಡೆಲ್ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದ ಅವರು, ಆ್ಯಂಟಿಜೆನ್ (ಆರ್.ಎ.ಟಿ.) ಪರೀಕ್ಷೆಗೆ ಸ್ಯಾಂಪಲ್ ತೆಗೆಯುವಾಗಲೇ ಆರ್.ಟಿ.-ಪಿ.ಸಿ.ಆರ್. ಪರೀಕ್ಷೆಗೆ ಬೇಕಾದ ಸ್ಯಾಂಪಲ್ಅನ್ನು ತೆಗೆದುಕೊಳ್ಳಬೇಕು. ಆ್ಯಂಟಿಜೆನ್ ಪರೀಕ್ಷೆಯಲ್ಲಿ ನೆಗೆಟಿವ್ ಬಂದರೆ ಅಂತವರ ಸ್ಯಾಂಪಲ್ ಅನ್ನು ಆರ್.ಟಿ.-ಪಿ.ಸಿ.ಆರ್. ಪರೀಕ್ಷೆಗೆ ಕಳುಹಿಸಬೇಕು ಎಂದರು.
ಡೆತ್ ಆಡಿಟ್ಅನ್ನು ಸರಿಯಾಗಿ ಮಾಡಬೇಕು. ಜಿಲ್ಲೆಯಲ್ಲಿ ಆಗಿರುವ ಸಾವಿನ ಸಂಖ್ಯೆಯಲ್ಲಿ ಅಕ್ಕ-ಪಕ್ಕದ ಜಿಲ್ಲೆಯ ರೋಗಿಗಳ ಸಂಖ್ಯೆಯನ್ನು ಪರಿಗಣಿಸಲಾಗಿದ್ದು, ಇದರ ಪ್ರಮಾಣವನ್ನು ಸರಿಯಾಗಿ ಆಡಿಟ್ ಮಾಡಬೇಕು. ಇನ್ನು ಸಾರ್ವಜನಿಕರು ಧೈರ್ಯವಾಗಿ ಬಂದು ಪರೀಕ್ಷೆ ಮಾಡಿಸಿಕೊಳ್ಳಲು ಪ್ರೇರೆಪಿಸುವ ನಿಟ್ಟಿನಲ್ಲಿ ಜಾಗೃತಿಗಾಗಿ ಪ್ರಚಾರ ಮಾಡಲು ಐ.ಇ.ಸಿ. ಕಾರ್ಯಕ್ರಮಗಳನ್ನು ಹೆಚ್ಚಿಸಬೇಕು. ಪ್ರತಿವಾರ ಎಲ್ಲಾ ನೋಡಲ್ ಅಧಿಕಾರಿಗಳ ಸಭೆ ನಡೆಸಲಾಗುವುದು. ಎಲ್ಲಾ ಹಂತದ ಅಧಿಕಾರಿಗಳ ನಡುವೆ ಸಮನ್ವಯ ಇರಬೇಕು. ಸಾವಿನ ಸಂಖ್ಯೆಯನ್ನು ಕಡಿಮೆ ಮಾಡುವುದು ಎಲ್ಲರ ಗುರಿ ಎಂದು ಇದೇ ವೇಳೆ ತಿಳಿಸಿದರು.