ಮೈಸೂರು: ಕೊರೊನಾ ಎರಡನೇ ಅಲೆ ಭೀತಿ ಹಿನ್ನೆಲೆಯಲ್ಲಿ ವ್ಯಾಕ್ಸಿನ್ ಪಡೆದುಕೊಳ್ಳಲು ವಯೋವೃದ್ಧರು ಮುಗಿಬಿದ್ದಿರುವ ಘಟನೆ ತಿ.ನರಸೀಪುರ ತಾಲೂಕಿನಲ್ಲಿ ನಡೆದಿದೆ.
ಕೊರೊನಾ ಎರಡನೇ ಅಲೆ ಭೀತಿ: ವ್ಯಾಕ್ಸಿನ್ಗೆ ಮುಗಿಬಿದ್ದ ವಯೋವೃದ್ಧರು - Covid Vaccine at kupya Primary Health Center
ತಿ.ನರಸೀಪುರ ತಾಲೂಕಿನ ಕುಪ್ಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆರೋಗ್ಯ ಇಲಾಖೆಯಿಂದ 60 ವರ್ಷಕ್ಕಿಂತ ಮೇಲ್ಪಟ್ಟ ವಯೋವೃದ್ದರಿಗೆ ಕೋವಿಡ್ ವ್ಯಾಕ್ಸಿನ್ ನೀಡುತ್ತಿರುವ ಹಿನ್ನೆಲೆ ಆರೋಗ್ಯ ಕೇಂದ್ರದಲ್ಲಿ ವ್ಯಾಕ್ಸಿನ್ ಪಡೆಯಲು ವಯೋವೃದ್ಧರು ಹಾಗೂ ಸಾರ್ವಜನಿಕರು ಸಾಲುಗಟ್ಟಿ ನಿಂತಿದ್ದಾರೆ.
ಕೋವಿಡ್ ವ್ಯಾಕ್ಸಿನ್
ತಾಲೂಕಿನ ಕುಪ್ಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ, ಆರೋಗ್ಯ ಇಲಾಖೆಯಿಂದ 60 ವರ್ಷಕ್ಕಿಂತ ಮೇಲ್ಪಟ್ಟ ವಯೋವೃದ್ದರಿಗೆ ಕೋವಿಡ್ ವ್ಯಾಕ್ಸಿನ್ ನೀಡುತ್ತಿರುವ ಹಿನ್ನೆಲೆ ಆರೋಗ್ಯ ಕೇಂದ್ರದಲ್ಲಿ ವ್ಯಾಕ್ಸಿನ್ ಪಡೆಯಲು ವಯೋವೃದ್ಧರು ಹಾಗೂ ಸಾರ್ವಜನಿಕರು ಸಾಲುಗಟ್ಟಿ ನಿಂತಿದ್ದಾರೆ.
ಮುಂಜಾನೆಯಿಂದಲೇ ಸಾರ್ವಜನಿಕರು ಹಾಗೂ ವಯೋವೃದ್ಧರು ಆರೋಗ್ಯ ಕೇಂದ್ರದಲ್ಲಿ ನೋಂದಣಿಗಾಗಿ ಕುಳಿತ್ತಿದ್ದಾರೆ.