ಮೈಸೂರು:ಕಾಡಾನೆ ದಾಳಿಯಿಂದ ಹಸುವೊಂದು ಬಲಿಯಾಗಿರುವ ಘಟನೆ ನಾಗರಹೊಳೆ ರಾಷ್ಟ್ರೀಯ ಉದ್ಯಾನದ ಬಳಿ ಇರುವ ಹೆಬ್ಬಾಳ ಗ್ರಾಮದಲ್ಲಿ ನಡೆದಿದೆ. ನಾಗರಹೊಳೆ ರಾಷ್ಟ್ರೀಯ ಉದ್ಯಾನದ ಕಿಕ್ಕೇರಿ ಕಟ್ಟೆ ಕಡೆಯ ಕಲ್ಲುಮಂಟಿ ಭಾಗದಿಂದ ಈ ಕಾಡಾನೆ ಬಂದಿದ್ದು, ಹೆಬ್ಬಾಳ ಗ್ರಾಮದಲ್ಲಿ ಅಟ್ಟಹಾಸ ಮೆರೆದಿದೆ.
ಕಾಡಾನೆ ಹಾವಳಿಗೆ ಹಸು ಬಲಿಯಾಯ್ತು.. ಗ್ರಾಮಸ್ಥರ ಗೋಳು ಕೇಳೋರು ಯಾರು..? - mysore latest news
ಮೈಸೂರಿನ ನಾಗರಹೊಳೆ ರಾಷ್ಟ್ರೀಯ ಉದ್ಯಾನದ ಭಾಗದಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗಿದೆ. ಅದರ ಸುತ್ತಲಿನ ಗ್ರಾಮಸ್ಥರು ಭಯಭೀತರಾಗಿದ್ದಾರೆ. ಈ ನಡುವೆ ಕಾಡಾನೆ ದಾಳಿಗೆ ಹಸುವೊಂದು ಬಲಿಯಾಗಿದೆ.
ಕಾಡಾನೆ ದಾಳಿಗೆ ಹಸು ಬಲಿ
ಹೆಬ್ಬಾಳ ಗ್ರಾಮದ ನಿವಾಸಿಯಾದ ವೆಂಕಟೇಶ್ ಶೆಟ್ಟಿ ಅವರು ಮನೆ ಮುಂದೆ ಕಟ್ಟಿದ್ದ ಹಸುವಿನ ಮೇಲೆ ಕಾಡಾನೆ ದಾಳಿ ನಡೆಸಿದ ಕಾರಣ ಹಸು ಸ್ಥಳದಲ್ಲೇ ಮೃತಪಟ್ಟಿದೆ. ಸ್ಥಳಕ್ಕೆ ಅರಣ್ಯ ಇಲಾಖೆಯ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ, ಗ್ರಾಮಸ್ಥರು ಅರಣ್ಯ ಇಲಾಖೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ಈ ಭಾಗದಲ್ಲಿ ಕಾಡಾನೆಗಳ ಹಾವಳಿ ತಪ್ಪಿಸಲು ವಿಫಲವಾಗಿದಾರೆ ಎಂದು ಆರೋಪಿಸಿದ್ದಾರೆ. ಈ ಹಿಂದೆ ಸಮಸ್ಯೆ ಪರಿಹಾರ ಮಾಡುವುದಾಗಿ ಜಿಲ್ಲಾಡಳಿತ ಭರವಸೆ ನೀಡಿತ್ತು. ಆದರೆ, ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.