ಮೈಸೂರು: ರೈತರು ಸಾರ್ವಜನಿಕ ರಸ್ತೆಗಳಲ್ಲಿ ಬೆಳೆಗಳನ್ನು ಒಕ್ಕಣೆ ಮಾಡಿದರೆ ಅಂತಹವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲಾಗುವುದು ಎಂದು ಪಿರಿಯಾಪಟ್ಟಣ ಲೋಕೋಪಯೋಗಿ ಇಲಾಖೆಯ ಸಹಾಯಕ ಅಭಿಯಂತರ ಕುಮಾರ್ ಖಡಕ್ ಎಚ್ಚರಿಕೆ ರವಾನಿಸಿದ್ದಾರೆ.
ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಭೋಗನಹಳ್ಳಿ, ಎನ್ ಶೆಟ್ಟಹಳ್ಳಿ ದೊಡ್ಡಕಮರಳ್ಳಿ, ಶ್ಯಾನುಭೋಗನಹಳ್ಳಿ ಹಾಗೂ ಇನ್ನೂ ಮುಂತಾದ ಗ್ರಾಮಗಳಲ್ಲಿ ರೈತರು ಹುರುಳಿ, ರಾಗಿ, ಜೋಳ, ಭತ್ತ, ಅಲಸಂದೆ ಮುಂತಾದ ಬೆಳೆಗಳನ್ನು ಒಣಗಿಸಲು ರಸ್ತೆಗಳಲ್ಲಿ ಹರಡುತ್ತಿದ್ದು, ಇದರಿಂದ ರಸ್ತೆಯಲ್ಲಿ ಸಂಚರಿಸುವ ವಾಹನಗಳಿಗೆ ಹಾಗೂ ಸಾರ್ವಜನಿಕರಿಗೆ ಸಂಚಾರಕ್ಕೆ ತೀವ್ರ ತೊಂದರೆಯಾಗುತ್ತಿದೆ ಎಂದರು.