ಕರ್ನಾಟಕ

karnataka

ETV Bharat / state

ಮೈಸೂರು ದಸರಾ.. ಯುವ ಸಂಭ್ರಮಕ್ಕೆ ಚಾಲನೆ ನೀಡಿದ‌ ನಟ ಡಾಲಿ ಧನಂಜಯ್ - Etv Bharat Kannada

ಸ್ಯಾಂಡಲ್​ವುಡ್​ನ ಖ್ಯಾತ ನಟ ಡಾಲಿ ಧನಂಜಯ್ ದಸರಾ ಯುವ ಸಂಭ್ರಮಕ್ಕೆ ಚಾಲನೆ ನೀಡಿದರು.

KN_MYS
ಯುವ ಸಂಭ್ರಮಕ್ಕೆ ಚಾಲನೆ

By

Published : Sep 17, 2022, 7:47 AM IST

ಮೈಸೂರು: ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ 9‌ದಿನಗಳ ಕಾಲ ನಡೆಯಲಿರುವ ಯುವ ಸಂಭ್ರಮಕ್ಕೆ‌ ಸಚಿವ ಎಸ್.ಟಿ.ಸೋಮಶೇಖರ್ ಹಾಗೂ ನಟ ಡಾಲಿ ಧನಂಜಯ್ ಅವರು ಮಾನಸಗಂಗೋತ್ರಿಯ ಬಯಲು ರಂಗಮಂದಿರದಲ್ಲಿ ಡೊಳ್ಳು ಬಾರಿಸುವ ಮೂಲಕ ಉದ್ಘಾಟಿಸಿದರು.

ಬಳಿಕ ಮಾತನಾಡಿದ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು, ಕೋವಿಡ್ ಅಲೆಯು ಗಣನೀಯವಾಗಿ ಕಡಿಮೆಯಾಗುತ್ತಿರುವ ಹಿನ್ನೆಲೆಯಲ್ಲಿ ವಿಶ್ವವಿಖ್ಯಾತ ನಾಡಹಬ್ಬ ದಸರಾವನ್ನು ಅದ್ಧೂರಿಯಾಗಿ ಆಚರಣೆ ಮಾಡಲು ಮುಖ್ಯಮಂತ್ರಿ ಬಸವರಾಜ ಬೊಮ್ಮಯಿ ನೇತೃತ್ವದ ರಾಜ್ಯ ಸರ್ಕಾರ ತೀರ್ಮಾನ ಮಾಡಿದ್ದರಿಂದ ಈ ಬಾರಿಯ ದಸರಾವನ್ನು ಅದ್ಧೂರಿಯಾಗಿ ಆಚರಿಸಲಾಗುತ್ತಿದೆ ಎಂದರು.

ಯುವ ಸಂಭ್ರಮಕ್ಕೆ 100ಕ್ಕೂ ಹೆಚ್ಚಿನ ಕಾಲೇಜುಗಳ ವಿದ್ಯಾರ್ಥಿಗಳು ಬಂದಿದ್ದು, ಸಂತೋಷದಿಂದ ಭಾಗವಹಿಸಿ ಪ್ರತಿಭೆಯನ್ನು ತೋರಿಸಿಕೊಳ್ಳಲು ಸುವರ್ಣ ಅವಕಾಶ. ಹೀಗಾಗಿ ಇಂತಹ ಕಾರ್ಯಕ್ರಮವನ್ನು ವಿದ್ಯಾರ್ಥಿಗಳು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಹೇಳಿದರು.

ಬಳಿಕ ಡಾಲಿ ಧನಂಜಯ್ ಅವರು ಮಾತನಾಡಿ, ಇಂತಹ ಹಬ್ಬಗಳು ಪ್ರತಿನಿತ್ಯ ಇರಬೇಕು. ಹಬ್ಬಗಳನ್ನು ಜಾತಿ, ಮತ ಮರೆತು ಪ್ರತಿಯೊಬ್ಭರು ಆಚರಿಸಬೇಕು. ಹಬ್ಬಗಳಲ್ಲಿ ಗಲಾಟೆ ಇರಬಾರದು. ನಮ್ಮ ಗುರಿ ಮುಟ್ಟಿ ಸಾಧನೆ ಮಾಡಿದಾಗ ಇಂತಹ ಹಬ್ಬಕ್ಕೆ ಇನ್ನಷ್ಟು ಮೆರಗು ಬರುತ್ತದೆ. ಸಾಧನೆ ಮಾಡಲು ಸಮಯ ತೆಗೆದುಕೊಳ್ಳುತ್ತದೆ. ಇದರಿಂದ ಯಾವುದೆ ಕಾರಣಕ್ಕೆ ಹಿಂದೆ ಸರಿಯಬಾರದು ಎಂದು ಕಿವಿಮಾತು ಹೇಳಿದರು.

ನಾನು ಇದೇ ಗಂಗೋತ್ರಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾಗ ಯುವ ದಸರಾ ಇಲ್ಲೆಯೇ ನಡೆಯುತ್ತಿತ್ತು. ಆ ಸಂದರ್ಭದಲ್ಲಿ ನಾನೂ ಸಹ ಕಾರ್ಯಕ್ರಮಕ್ಕೆ ಬಂದ ಕುಣಿದಾಡಿದ ನೆನಪುಗಳು ಈಗಲೂ ಸಹ ನೆನಪಿಗೆ ಬರುತ್ತದೆ. ನಮ್ಮ ಮನಸ್ಥಿತಿಯನ್ನು ನಾವೆ ನಿಯಂತ್ರಣ ಮಾಡಿಕೊಳ್ಳಬೇಕು. ಸ್ವಾತಂತ್ರ್ಯವಾಗಿ ಆಲೋಚನೆ ಮಾಡುವ ಕೌಶಲ್ಯವನ್ನು ಬೆಳೆಸಿಕೊಳ್ಳಬೇಕು ಎಂದರು.

ಇನ್ನು ನಟ ಡಾಲಿ ಧನಂಜಯ್ ವೇದಿಕೆಯತ್ತ ಬರುತ್ತಿದ್ದಂತೆ ಅಭಿಮಾನಿಗಳು ನಟ ಧನಂಜಯ್ ಅವರತ್ತ ಕೈ ಬಿಸಿ ಡಾಲಿ ಧನಂಜಯ್ ಅವರನ್ನು ಬರಮಾಡಿಕೊಂಡರು. ಬಳಿ ಧನಂಜಯ್ ಅವರು ಅಭಿಮಾನಿಗಳ ಆಸೆಯಂತೆ ಟಗರು, ಬಡವರಾಸ್ಕಲ್, ಮಾನ್ಸೂನ್ ರಾಗ ಚಿತ್ರದ ಡೈಲಾಗ್ ಹೊಡೆದು ಅಭಿಮಾನಿಗಳನ್ನು ರಂಜಿಸಿದರು.

ಅಣ್ಣವ್ರ ಹಾಡಿಗೆ ಕುಣಿದ ಸಚಿವ: ದಿವಂಗತ ಡಾ.ರಾಜ್ ಕುಮಾರ್ ಅವರ ಆಕಸ್ಮಿಕ ಚಲನಚಿತ್ರದ ಹುಟ್ಟಿದ್ದರೆ ಕನ್ನಡ ನಾಡಿನಲ್ಲಿ ಹುಟ್ಟಬೇಕು.. ಹಾಡಿಗೆ ಸಚಿವ ಎಸ್.ಟಿ. ಸೋಮಶೇಖರ್ ಕುಣಿದ ಕುಪ್ಪಳಿಸಿದರು.

ಇದನ್ನೂ ಓದಿ:ಮೈಸೂರು ದಸರಾ ಚಲನ ಚಿತ್ರೋತ್ಸವ: ನಟ ಶಿವಣ್ಣ, ಸಿಎಂ ಬೊಮ್ಮಾಯಿ ಅವರಿಂದ ಉದ್ಘಾಟನೆ

ABOUT THE AUTHOR

...view details