ಮೈಸೂರು: ದಸರಾ-2021ರ ಉನ್ನತ ಮಟ್ಟದ ಸಮಿತಿಯ ಸಭೆಯು ಸೆಪ್ಟೆಂಬರ್ 3 ರಂದು ಮುಖ್ಯಮಂತ್ರಿಯವರ ನೇತೃತ್ವದಲ್ಲಿ ವಿಧಾನಸೌಧದಲ್ಲಿ ನಡೆಯಲಿದೆ. ನಾಡಹಬ್ಬ ಮೈಸೂರು ದಸರಾ-2021 ಆಚರಣೆ ಸಂಬಂಧ ಪೂರ್ವಭಾವಿಯಾಗಿ ಚರ್ಚಿಸಲು ಉನ್ನತ ಮಟ್ಟದ ಸಮಿತಿಯ ಸಭೆ ನಡೆಯಲಿದ್ದು, ಮೈಸೂರು ಜಿಲ್ಲಾಧಿಕಾರಿ ಸೇರಿದಂತೆ ಉನ್ನತ ಅಧಿಕಾರಿಗಳು ಭಾಗವಹಿಸಲಿದ್ದಾರೆ.
ಸರಳ ಅಥವಾ ಅದ್ದೂರಿ ದಸರಾ? :
ಕೋವಿಡ್ ಹಿನ್ನೆಲೆಯಲ್ಲಿ ಕಳೆದ ವರ್ಷ ದಸರಾವನ್ನು ಸರಳ ಹಾಗೂ ಸಾಂಪ್ರದಾಯಿಕವಾಗಿ ಅರಮನೆ ಆವರಣದಲ್ಲಿ ಆಚರಿಸಲಾಗಿತ್ತು. ಈ ಬಾರಿಯೂ ಕೋವಿಡ್ ಮೂರನೇ ಅಲೆಯ ಆತಂಕವಿರುವ ಕಾರಣ ಯಾವ ರೀತಿ ಆಚರಿಸಬೇಕು ಎಂಬ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸಿ ತಿರ್ಮಾನ ತೆಗೆದುಕೊಳ್ಳುವ ಸಾಧ್ಯತೆಯಿದೆ.