ಮೈಸೂರು: ವಿಶ್ವ ವಿಖ್ಯಾತ ದಸರಾ ಹಬ್ಬವನ್ನು ಸರಳ ಹಾಗೂ ಸಾಂಪ್ರದಾಯಿಕವಾಗಿ, ಸರಳವಾಗಿ ಆಚರಿಸಲು ಸರ್ಕಾರ ತೀರ್ಮಾನಿಸಿದೆ. ಅಕ್ಟೋಬರ್ 17ರಂದು ಚಾಮುಂಡಿ ಬೆಟ್ಟದಲ್ಲಿ ಮೈಸೂರು ದಸರಾ ಮಹೋತ್ಸವ ಉದ್ಘಾಟನೆಯಾಗಲಿದ್ದು ಕಾರ್ಯಕ್ರಮಕ್ಕೆ 200 ಮಂದಿಗೆ ಮಾತ್ರ ಅವಕಾಶ ನೀಡಲಾಗಿದೆ.
ದಸರಾಗೆ ಹೊರಡುವ ಮುನ್ನ ಸರ್ಕಾರ ವಿಧಿಸಿದ ಮಾರ್ಗಸೂಚಿಗಳೇನು ತಿಳಿದುಕೊಳ್ಳಿ.. - dasara guidelines by state government
ಕೊರೊನಾ ಹಿನ್ನೆಲೆ ಈ ಬಾರಿ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವವನ್ನು ಸರಳ ಹಾಗೂ ಸಾಂಪ್ರದಾಯಿಕವಾಗಿ ಆಚರಿಸಲು ಸರ್ಕಾರ ಮುಂದಾಗಿದ್ದು, ವಿಶೇಷ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ.
ದಸರಾ ಮಹೋತ್ಸವ
ಸರ್ಕಾರ ಬಿಡುಗಡೆ ಮಾಡಿರುವ ಮಾರ್ಗಸೂಚಿಗಳು:
- ದಸರಾ ಜಂಬೂಸವಾರಿಯಲ್ಲಿ 300 ಮಂದಿಗೆ ಅವಕಾಶ
- ಅರಮನೆ ಆವರಣದಲ್ಲಿ 50 ಮಂದಿಗೆ ಮಾತ್ರ ಅವಕಾಶ
- ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ 50 ಜನಕ್ಕೆ ಮಾತ್ರ ಪ್ರವೇಶ
- ಸ್ಥಳೀಯ ಕಲಾವಿದರಿಗೆ ಕಾರ್ಯಕ್ರಮಕ್ಕೆ 2 ಗಂಟೆ ಮಿತಿ
- ದಸರಾ ಸಮಾರಂಭದ ವೇಳೆ ಸಾರ್ವಜನಿಕರಿಗೆ ಪ್ರವೇಶವಿಲ್ಲ
- ಸಾಮಾಜಿಕ ಅಂತರ, ಮಾಸ್ಕ್ ಮತ್ತು ಸ್ಯಾನಿಟೈಸರ್ ಬಳಕೆ ಕಡ್ಡಾಯ
- ಪ್ರಮುಖ ಆಕರ್ಷಣೆಯಾದ ಅರಮನೆ ದೀಪಾಲಂಕಾರ ಸಂಜೆ 7ರಿಂದ 10ರವರೆಗೆ ಮಾತ್ರ
- ಅರಮನೆಯ ಸಿಬ್ಬಂದಿ, ಆಚರಣೆಯಲ್ಲಿ ಪಾಲ್ಗೊಳ್ಳುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ