ಮೈಸೂರು:ಶರನ್ನವರಾತ್ರಿಯ 10ನೇ ದಿನವಾದ ಇಂದು ಅರಮನೆಯಲ್ಲಿ ಸಾಂಪ್ರದಾಯಿಕ ವಿಜಯದಶಮಿ ಆಚರಣೆ ನೆರವೇರಲಿದ್ದು, ಇದಕ್ಕಾಗಿ ಸಾಂಸ್ಕೃತಿಕ ನಗರ ಸಜ್ಜಾಗಿದೆ. ಬೆಳಗ್ಗೆ 9.45 ಕ್ಕೆ ಪಟ್ಟದ ಆನೆ, ಕುದುರೆ, ಒಂಟೆ, ಹಸು ಆನೆ ಅರಮನೆ ಬಾಗಿಲಿಗೆ ಬರುತ್ತದೆ. ಅಲ್ಲಿ ಅವುಗಳಿಗೆ ಸಾಂಪ್ರದಾಯಿಕ ಪೂಜೆ ಸಲ್ಲಿಸಲಾಗುತ್ತದೆ.
ಬೆಳಗ್ಗೆ 10.15 ಕ್ಕೆ ಕಲ್ಯಾಣ ಮಂಟಪದಲ್ಲಿ ಪೂಜೆ ಹಾಗೂ ವಜ್ರಮುಷ್ಠಿ ಕಾಳಗ ನಡೆಯಲಿದ್ದು, ನಂತರ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ವಿಜಯ ಯಾತ್ರೆಯನ್ನು ಮಾಡಿ ನಂತರ ಭುವನೇಶ್ವರಿ ದೇವಸ್ಥಾನದ ಆವರಣದಲ್ಲಿರುವ ಬನ್ನಿ ಮರಕ್ಕೆ ಶಮಿ ಪೂಜೆ ಸಲ್ಲಿಸುತ್ತಾರೆ. ವಿಜಯಯಾತ್ರೆ ಮುಗಿದ ನಂತರ ಅರಮನೆಗೆ ವಾಪಸ್ ಆಗಿ ಚಾಮುಂಡೇಶ್ವರಿ ಪೂಜೆ ಸಲ್ಲಿಸುತ್ತಾರೆ. ಆ ಮೂಲಕ ವಿಜಯದಶಮಿಗೆ ಸಾಂಪ್ರದಾಯಿಕವಾಗಿ ಕೊನೆಗೊಳ್ಳುತ್ತದೆ.
ಇದನ್ನೂ ಓದಿ :ಆಯುಧ ಪೂಜಾ ಹಿನ್ನೆಲೆ: ಗಜಪಡೆಗೆ ವಿಶೇಷ ಪೂಜೆ