ಮೈಸೂರು:ಈ ಬಾರಿ ದಸರಾ ಮಹೋತ್ಸವಕ್ಕೆ ಮತ್ತಷ್ಟು ಮೆರಗು ಬರಲಿದೆ. ಸಂಗೀತ ಕಾರ್ಯಕ್ರಮದಲ್ಲಿ ತಮ್ಮ ಗಾನಸುಧೆ ಹರಿಸಲು ಮಹಾರಾಷ್ಟ್ರದ ಸಿಎಂ ಪತ್ನಿ ಆಸಕ್ತಿ ತೋರಿದ್ದಾರೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಹೇಳಿದ್ದಾರೆ.
ದಸರಾ ಸಂಗೀತ ಕಾರ್ಯಕ್ರಮದಲ್ಲಿ ಗಾನಸುಧೆ ಹರಿಸಲಿದ್ದಾರೆ ಮಹಾರಾಷ್ಟ್ರ ಸಿಎಂ ಪತ್ನಿ - ದಸರಾ ದೀಪಾಲಂಕಾರ ಪೋಸ್ಟರ್ ಬಿಡುಗಡೆ ಕಾರ್ಯಕ್ರಮ
ಈ ಬಾರಿಯ ದಸರಾ ಮಹೋತ್ಸವ ಮತ್ತಷ್ಟು ರಂಗೇರಲಿದೆ. ಸಂಗೀತ ಕಾರ್ಯಕ್ರಮದಲ್ಲಿ ಗಾನಸುಧೆ ಹರಿಸಲು ಕೊಡಲು ಮಹಾರಾಷ್ಟ್ರದ ಸಿಎಂ ಫಡ್ನವೀಸ್ ಪತ್ನಿ ಅಮೃತಾ ಫಡ್ನವೀಸ್ ಆಸಕ್ತಿ ತೋರಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಹೇಳಿದ್ದಾರೆ.
ಮಹಾರಾಷ್ಟ್ರ ಸಿಎಂ ಪತ್ನಿ
ದಸರಾ ದೀಪಾಲಂಕಾರ ಪೋಸ್ಟರ್ ಬಿಡುಗಡೆ ಕಾರ್ಯಕ್ರಮದಲ್ಲಿ ಈ ವಿಷಯ ತಿಳಿಸಿದ ಅವರು, ಮಹಾರಾಷ್ಟ್ರದ ಸಿಎಂ ಪತ್ನಿ ಅಮೃತಾ ಫಡ್ನವಿಸ್ ತುಂಬಾ ಚೆನ್ನಾಗಿ ಹಾಡುತ್ತಾರೆ ಎಂದು ಗೊತ್ತಾಗಿದೆ. ಅವರು ಸಹ ದಸರಾದಲ್ಲಿ ಸಂಗೀತ ಕಾರ್ಯಕ್ರಮ ನೀಡಲು ಆಸಕ್ತಿ ತೋರಿದ್ದಾರೆ. ಸಂಗೀತ ಕಾರ್ಯಕ್ರಮದ ಜೊತೆ ದಸರಾ ನೋಡಿದಂತಾಗುತ್ತದೆ ಎಂದು ಹೇಳಿದ್ದಾರೆ. ನಾನೇ ಕರೆ ಮಾಡಿದಾಗ ಅವರು ಸಂಪರ್ಕಕ್ಕೆ ಸಿಗಲಿಲ್ಲ. ಮುಖ್ಯಮಂತ್ರಿ ಯಡಿಯೂರಪ್ಪ ಜೊತೆ ಈ ವಿಚಾರ ಚರ್ಚಿಸಿ ನಾನು ಸಹ ಮಹಾರಾಷ್ಟ್ರದ ಸಿಎಂ ಪತ್ನಿ ಅಮೃತಾ ಅವರ ಜೊತೆ ಮಾತನಾಡುತ್ತೇನೆ ಎಂದು ಸಚಿವ ಸೋಮಣ್ಣ ತಿಳಿಸಿದ್ದಾರೆ.
Last Updated : Sep 13, 2019, 3:01 PM IST