ಮೈಸೂರು: 90 ಮಂದಿ ಕೊರೊನಾ ಸೋಂಕಿತರು ಪತ್ತೆಯಾಗಿದ್ದರಿಂದ ರೆಡ್ ಝೋನ್ ಜಿಲ್ಲೆಗಳ ಪಟ್ಟಿಗೆ ಸೇರಿದ್ದ ಮೈಸೂರು, ಇದೀಗ ಕೊರೊನಾ ಮುಕ್ತ ಜಿಲ್ಲೆಯಾಗುವತ್ತ ದಾಪುಗಾಲು ಇಟ್ಟಿದೆ. ಜಿಲ್ಲೆಯಲ್ಲಿ ಇಂದು ಯಾವುದೇ ಕೊರೊನಾ ಸೋಂಕಿತ ಪ್ರಕರಣಗಳು ಪತ್ತೆಯಾಗದ ಕಾರಣ ಮೈಸೂರಿಗರು ನಿಟ್ಟುಸಿರು ಬಿಟ್ಟಿದ್ದಾರೆ.
ಕೊರೊನಾ ಮುಕ್ತ ಜಿಲ್ಲೆಯಾಗುವತ್ತ ಮೈಸೂರು: ಮತ್ತೆ ಇಬ್ಬರು ಡಿಸ್ಚಾರ್ಜ್ - ಕೊರೊನಾ ಸೋಂಕಿತ ಪ್ರಕರಣಗಳು
ರೆಡ್ ಝೋನ್ ಜಿಲ್ಲೆಗಳ ಪಟ್ಟಿಗೆ ಸೇರಿದ್ದ ಮೈಸೂರು, ಇದೀಗ ಕೊರೊನಾ ಮುಕ್ತ ಜಿಲ್ಲೆಯಾಗುವತ್ತ ದಾಪುಗಾಲು ಹಾಕುತ್ತಿದೆ. ಇಂದು ಇಬ್ಬರು ಗುಣಮುಖರಾಗಿದ್ದರಿಂದ ಜಿಲ್ಲೆಯ ಜನರು ನಿಟ್ಟುಸಿರು ಬಿಟ್ಟಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿರುವ ಜಿಲ್ಲಾಧಿಕಾರಿ ಅಭಿರಾಮ್ ಜಿ. ಶಂಕರ್, ಜಿಲ್ಲೆಯಲ್ಲಿ ಇಂದು ಯಾವುದೇ ಕೊರೊನಾ ಸೋಂಕಿತ ಪ್ರಕರಣಗಳು ಪತ್ತೆಯಾಗಿಲ್ಲ. ಅಲ್ಲದೇ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗುತ್ತಿದ್ದು, ಜನರು ಸಹ ನಿರಾಳರಾಗುತ್ತಿದ್ದಾರೆ ಎಂದು ಜಿಲ್ಲಾಧಿಕಾರಿ ಅಭಿರಾಮ್ ಜಿ. ಶಂಕರ್ ತಿಳಿಸಿದ್ದಾರೆ.
ಕೋವಿಡ್ ಆಸ್ಪತ್ರೆಯಲ್ಲಿ ಇಂದು ಇಬ್ಬರು ಗುಣಮುಖರಾಗಿದ್ದು, ಅವರನ್ನು ಮನೆಗೆ ಕಳುಹಿಸಲಾಗಿದೆ. ಇನ್ನು ಕಳೆದ 8 ದಿನಗಳಿಂದ ಮೈಸೂರಿನಲ್ಲಿ ಯಾವುದೇ ಹೊಸ ಪ್ರಕರಣ ಪತ್ತೆಯಾಗಿಲ್ಲ. ಇಲ್ಲಿಯವರೆಗೆ ಒಟ್ಟು 85 ಸೋಂಕಿತರು ಗುಣಮುಖರಾಗಿದ್ದು, ಉಳಿದ 5 ಜನ ಮಾತ್ರ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದರು.