ಕರ್ನಾಟಕ

karnataka

ETV Bharat / state

ಪ್ಲಾಸ್ಟಿಕ್ ನಿಷೇಧ; ಏ.5ರಿಂದ ಕಠಿಣ ಕ್ರಮ: ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಕಟ್ಟಪ್ಪಣೆ - ಪಾಲಿಕೆ, ಸ್ಥಳೀಯ ಸಂಸ್ಥೆ ಅಧಿಕಾರಿಗಳ ಜೊತೆ ಡಿಸಿ ಸಭೆ

ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ಪಾಲಿಕೆ ಮತ್ತು ಜಿಲ್ಲೆಯ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳ ಜೊತೆ ಸಭೆ ನಡೆಸಿದರು. ಈ ವೇಳೆ ಪರಿಸರ ಸಂರಕ್ಷಣೆಗಾಗಿ ಪ್ಲಾಸ್ಟಿಕ್​ ನೀಷೇಧ ಮಾಡಲು ಕಡ್ಡಾಯ ಕ್ರಮ ಕೈಗೊಳ್ಳಲು ಸೂಚಿಸಿದ್ದು, ಏ.05 ರಿಂದ ಸಂಪೂರ್ಣ ಪ್ಲಾಸ್ಟಿಕ್​​ ಬಂದ್​ ಮಾಡಲು ನಿರ್ಧರಿಸಿದರು.

ಜಿಲ್ಲಾಧಿಕಾರಿ ಸಭೆ
DC Rohini Sindhuri made meeting with municipal and local agency officer in Mysore

By

Published : Mar 5, 2021, 7:32 AM IST

ಮೈಸೂರು :ಪರಿಸರ ರಕ್ಷಣೆ ನಿಟ್ಟಿನಲ್ಲಿ ಪ್ಲಾಸ್ಟಿಕ್‌ ಬಳಕೆಗೆ ಕಡಿವಾಣ ಹಾಕಲು ನಿಷೇಧಿಸಲಾಗಿದ್ದು, ಏ. 5 ರಿಂದ ಕಡ್ಡಾಯವಾಗಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಪಾಲಿಕೆ ಹಾಗೂ ಜಿಲ್ಲೆಯ ಎಲ್ಲ ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳ ಜೊತೆ ಡಿಸಿ ಸಭೆ ನಡೆಸಿದರು. ಈ ವೇಳೆ ಮಾತನಾಡಿದ ಅವರು, ಪ್ಲಾಸ್ಟಿಕ್‌ ಬಳಕೆಯಿಂದ ಪರಿಸರದ ಮೇಲೆ ದುಷ್ಪರಿಣಾಮ ಉಂಟಾಗುತ್ತಿದೆ. ಈ ಹಿನ್ನೆಲೆಯಲ್ಲಿ ಪ್ಲಾಸ್ಟಿಕ್‌ ಬಳಕೆಗೆ ಕಡಿವಾಣ ಹಾಕಬೇಕಾದ ಅನಿವಾರ್ಯತೆ ಇದೆ. ಹಾಗಾಗಿ ಮಾರುಕಟ್ಟೆಯಲ್ಲಿನ ಎಲ್ಲ ಅಂಗಡಿ ಹಾಗೂ ಇತರ ಪ್ಲಾಸ್ಟಿಕ್‌ ಬಳಸುವ ಸ್ಥಳಗಳಲ್ಲಿ ಪ್ಲಾಸ್ಟಿಕ್ ಬಳಕೆಗೆ ಪರ್ಯಾಯವಾಗಿ ಕಾಗದ ಹಾಗೂ ಬಟ್ಟೆಯಿಂದ ತಯಾರಿಸಿದ ವಸ್ತುಗಳನ್ನು ಬಳಸಬೇಕು. ಕಾಗದದ ಲೋಟ, ಚೀಲ, ಬಟ್ಟೆ ಬ್ಯಾಗ್ ಬಳಕೆಯನ್ನು ರೂಢಿಸಿಕೊಳ್ಳಬೇಕು ಎಂದು ನಗರ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳಿಗೆ ತಿಳಿಸಿದರು.

ಪ್ಲಾಸ್ಟಿಕ್‌ಗೆ ಪರ್ಯಾಯವಾದ ವಸ್ತು ಬಳಸಲು ಅವಕಾಶ ನೀಡದೇ ಏಕಾಏಕಿ ದಾಳಿ ಮಾಡಿದರೆ ವ್ಯಾಪಾರಿಗಳಿಗೆ ಮತ್ತು ಗ್ರಾಹಕರಿಗೆ ಇಬ್ಬರಿಗೂ ತೊಂದರೆಯಾಗುತ್ತದೆ. ಆದ್ದರಿಂದ ಒಂದು ತಿಂಗಳ ಗಡುವು ನೀಡಿ ಕಠಣ ಕ್ರಮ ಕೈಗೊಳ್ಳಬೇಕು. ಮೊದಲನೆ ಹಂತದಲ್ಲಿ ನಗರ ಪಾಲಿಕೆ ಹಾಗೂ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್ ನಿಷೇಧವನ್ನು ಜಾರಿಗೆ ತರಲಾಗುವುದು. ನಂತರ ಗ್ರಾಮೀಣ ಪ್ರದೇಶಗಳಲ್ಲಿ ಪ್ಲಾಸ್ಟಿಕ್ ನಿಷೇಧಿಸಲಾಗುವುದು ಎಂದರು.

ಕಾವೇರಿ, ಕಬಿನಿ, ಹಾಗೂ ಲಕ್ಷ್ಮಣ ತೀರ್ಥ ನದಿಗಳಿಗೆ ಹುಣಸೂರು, ನಂಜನಗೂಡು, ತಿ.ನರಸೀಪುರ, ಬನ್ನೂರು ಪಟ್ಟಣಗಳ ತ್ಯಾಜ್ಯ ನೀರನ್ನು ನೇರವಾಗಿ ಬಿಡಬಾರದು. ಈ ನೀರನ್ನು ಸಂಸ್ಕರಿಸಿದ ನಂತರವೆ ನದಿಗೆ ಬಿಡಬೇಕು. ನೀರನ್ನು ಸಾಧ್ಯವಾದಷ್ಟು ಮರುಬಳಕೆ ಮಾಡಬೇಕು. ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಮಾದರಿಯಲ್ಲಿ ಮೈಸೂರಿನಲ್ಲಿ ಪ್ರತ್ಯೇಕ ಮಂಡಳಿ ಸ್ಥಾಪಿಸುವಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ನಗರ ಪಾಲಿಕೆಗೆ ತಿಳಿಸಿದರು.

ಸಭೆಯಲ್ಲಿ ಮಹಾನಗರ ಪಾಲಿಕೆ ಆಯುಕ್ತರಾದ ಶಿಲ್ವನಾಗ್, ಅಧೀಕ್ಷಕ ಇಂಜಿನಿಯರ್ ಬಿಳಿಗಿರಿ ರಂಗಸ್ವಾಮಿ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಅಶಾದ್ ಆರ್. ಷರೀಫ್, ನಗರ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ABOUT THE AUTHOR

...view details