ಕರ್ನಾಟಕ

karnataka

ETV Bharat / state

ಮೊದಲ ಬಾರಿಗೆ ನಂಜನಗೂಡು ಶ್ರೀಕಂಠೇಶ್ವರನ ದರ್ಶನ ಪಡೆದ ಡಿಸಿ ರೋಹಿಣಿ ಸಿಂಧೂರಿ - ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ

ಮೈಸೂರು ಜಿಲ್ಲೆಗೆ ನೂತನ ಜಿಲ್ಲಾಧಿಕಾರಿಯಾಗಿ ವರ್ಗಾವಣೆಯಾಗಿರುವ ರೋಹಿಣಿ ಸಿಂಧೂರಿ ಅವರು ಮೊದಲ ಬಾರಿಗೆ ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯಕ್ಕೆ ಭೇಟಿ ನೀಡಿದ್ದರು.

DC Rohini Sindhuri  visited Srikantheshwara's temple
ನಂಜನಗೂಡಿನ ಶ್ರೀಕಂಠೇಶ್ವರನ ದೇವಾಲಯಕ್ಕೆ ಭೇಟಿ ನೀಡಿದ ಡಿಸಿ ರೋಹಿಣಿ ಸಿಂಧೂರಿ

By

Published : Oct 6, 2020, 3:50 PM IST

Updated : Oct 6, 2020, 5:02 PM IST

ಮೈಸೂರು: ಜಿಲ್ಲೆಗೆ ನೂತನ ಜಿಲ್ಲಾಧಿಕಾರಿ ಆಗಿ ಬಂದಿರುವ ರೋಹಿಣಿ ಸಿಂಧೂರಿ ಅವರು ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯಕ್ಕೆ ಮೊದಲ ಬಾರಿಗೆ ಭೇಟಿ ನೀಡಿ, ದೇವರ ಆಶೀರ್ವಾದ ಪಡೆದುಕೊಂಡರು.

ನಂಜನಗೂಡಿನ ಶ್ರೀಕಂಠೇಶ್ವರನ ದೇವಾಲಯಕ್ಕೆ ಭೇಟಿ ನೀಡಿದ ಡಿಸಿ ರೋಹಿಣಿ ಸಿಂಧೂರಿ..

ಈ ಸಂದರ್ಭದಲ್ಲಿ ದೇವಾಲಯದ ಅರ್ಚಕರು ದೇವಸ್ಥಾನದ ಕೆಲವು ಸಮಸ್ಯೆಗಳನ್ನು ಜಿಲ್ಲಾಧಿಕಾರಿ ಗಮನಕ್ಕೆ ತಂದರು. ದೇವಾಲಯದ ಒಳಭಾಗದಲ್ಲಿ ಶುದ್ಧ ಬಾವಿ ನೀರಿನ ವ್ಯವಸ್ಥೆ ಕಲ್ಪಿಸಬೇಕು. ಬೇಸಿಗೆ ಸಂದರ್ಭದಲ್ಲಿ ಕಪಿಲಾ ನದಿಯಲ್ಲಿ ನೀರು ತುಂಬಾ ಕಲುಷಿತವಾಗುತ್ತದೆ. ಅದನ್ನು ದೇವರ ಅಭಿಷೇಕಕ್ಕೆ ಉಪಯೋಗಿಸಲು ಆಗುವುದಿಲ್ಲ. ಹಾಗಾಗಿ ಬಾವಿ ವ್ಯವಸ್ಥೆ ಮಾಡಿಸಿ ಎಂದು ಜಿಲ್ಲಾಧಿಕಾರಿಗೆ ಮನವಿ ಮಾಡಿದರು.

ಈ ಬಗ್ಗೆ ಕ್ರಮ ಕೈಗೊಳ್ಳುವುದಾಗಿ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಭರವಸೆ ನೀಡಿದರು.

Last Updated : Oct 6, 2020, 5:02 PM IST

ABOUT THE AUTHOR

...view details