ಮೈಸೂರು: ಅಪ್ರಾಪ್ತೆಯ ಮೇಲೆ ಅತ್ಯಾಚಾರವೆಸಗಿ ಆಕೆಗೆ ಹೆಣ್ಣು ಮಗು ಜನನಕ್ಕೆ ಕಾರಣನಾಗಿ ಪೋಕ್ಸೋ ಕಾಯ್ದೆಯಡಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ವ್ಯಕ್ತಿ ಮೃತಪಟ್ಟಿದ್ದಾನೆ.
ಪೋಕ್ಸೋ ಕಾಯ್ದೆಯಡಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ವ್ಯಕ್ತಿ ಸಾವು - ಪೋಕ್ಸೋ ಕಾಯ್ದೆ
ಪೋಕ್ಸೋ ಕಾಯ್ದೆಯಡಿ ಜೀವಾವಧಿ ಶಿಕ್ಷೆಗೆ ಗುರಿಯಾಗಿ ಕುರಳು ಬೇನೆಯಿಂದ ಬಳಲುತ್ತಿದ್ದ ವ್ಯಕ್ತಿಯೋರ್ವ ಮೃತಪಟ್ಟಿದ್ದಾನೆ.
![ಪೋಕ್ಸೋ ಕಾಯ್ದೆಯಡಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ವ್ಯಕ್ತಿ ಸಾವು Died person](https://etvbharatimages.akamaized.net/etvbharat/prod-images/768-512-5868771-thumbnail-3x2-vicky.jpg)
ಅಪ್ರಾಪ್ತೆಯ ಮೇಲೆ ಅತ್ಯಾಚಾರ ಪ್ರಕರಣದ ಹಿನ್ನೆಲೆ ಮೈಸೂರು ನ್ಯಾಯಾಲಯ ಮಹೇಶ್ಗೆ (36) ಎಂಬಾತನಿಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು. ಜೈಲು ಶಿಕ್ಷೆ ಅನುಭವಿಸುತ್ತಿದ್ದ ಈತ ಕರುಳು ಬೇನೆಯಿಂದ ಬಳಲುತ್ತಿದ್ದ. ಚಿಕಿತ್ಸೆಗಾಗಿ ಪೆರೋಲ್ ಮೇಲೆ ಜೈಲಿನಿಂದ ಹೊರ ಬಂದಿದ್ದ. ಪಿಕೆಟಿಬಿ ಆಸ್ಪತ್ರೆಯಲ್ಲಿ ಈತ ಚಿಕಿತ್ಸೆ ಪಡೆಯುತ್ತಿದ್ದ. ಆದರೆ ಚಿಕಿತ್ಸೆ ಫಲಕಾರಿಯಾಗದ ಕಾರಣ ಸಾವನ್ನಪ್ಪಿದ್ದಾನೆ.
ನಾನು ಸತ್ತರೆ ನನ್ನ ಮಗಳನ್ನು ಕರೆತಂದು ನನ್ನ ಮುಖ ದರ್ಶನ ಮಾಡಿಸಿದ ನಂತರವೇ ಅಂತ್ಯಕ್ರಿಯೆ ಮಾಡಿ ಎಂದು ಮಹೇಶ್ ಕೇಳಿಕೊಂಡಿದ್ದನಂತೆ. ಆತನ ಕೋರಿಕೆಯಂತೆ ಅಪ್ರಾಪ್ತೆಗೆ ಜನಿಸಿದ 5 ವರ್ಷದ ಪುತ್ರಿಗೆ ಪಾರ್ಥಿವ ಶರೀರದ ಅಂತಿಮ ದರ್ಶನ ಮಾಡಿಸಿದ್ದಾರೆ ಹಾಗೂ ಇಂದು ಅಂತ್ಯಕ್ರಿಯೆ ನೆರವೇರಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.