ಮೈಸೂರು: ಜೂಜು ಅಡ್ಡೆ ಮೇಲೆ ದಾಳಿ ಮಾಡಿದಾಗ ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ನೀರಿಗೆ ಜಿಗಿದ ವ್ಯಕ್ತಿ ಸಾವನ್ನಪ್ಪಿದ್ದಾನೆ.
ಜೂಜು ಅಡ್ಡೆ ಮೇಲೆ ಪೊಲೀಸರ ದಾಳಿ: ತಪ್ಪಿಸಿಕೊಳ್ಳಲು ಕೆರೆಗೆ ಹಾರಿದ ವ್ಯಕ್ತಿ ನೀರುಪಾಲು - mysure crime news
ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ಕೆರೆಗೆ ಹಾರಿ ವ್ಯಕ್ತಿಯೋರ್ವ ಮೃತಪಟ್ಟಿರುವ ಘಟನೆ ನಂಜನಗೂಡು ತಾಲೂಕಿನ ಹದಿನಾರು ಗ್ರಾಮದಲ್ಲಿ ನಡೆದಿದೆ.
Death
ನಂಜನಗೂಡು ತಾಲೂಕಿನ ಹದಿನಾರು ಗ್ರಾಮದ ನಂಜುಂಡ (37) ಮೃತ ವ್ಯಕ್ತಿ. 5 ರಿಂದ 6 ಜನ ಭಾನುವಾರ ಸಂಜೆ 6 ಗಂಟೆಗೆ ಇಸ್ಪೀಟ್ ಆಡುತ್ತಿದ್ದ ವೇಳೆ ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ ತಪ್ಪಿಸಿಕೊಳ್ಳಲು ಹದಿನಾರು ಕೆರೆಗೆ ಜಿಗಿದಿದ್ದ ನಂಜುಂಡ, ಈಜು ಬಾರದೆ ನೀರು ಪಾಲಾಗಿದ್ದಾನೆ.
ನಿನ್ನೆ ಸಂಜೆಯಿಂದಲೂ ನಂಜನಗೂಡು ಗ್ರಾಮಾಂತರ ಪೊಲೀಸರು, ಅಗ್ನಿಶಾಮಕ ದಳದ ಸಿಬ್ಬಂದಿ ಕೆರೆಯಲ್ಲಿ ಶೋಧ ಕಾರ್ಯ ಆರಂಭಿಸಿದ್ದರು. ಇಂದು ಬೆಳಗ್ಗೆ ನಂಜುಂಡನ ಮೃತದೇಹ ಪತ್ತೆಯಾಗಿದೆ.