ಮೈಸೂರು:ವಿಶ್ವ ವಿಖ್ಯಾತ ಮೈಸೂರು ಅರಮನೆಯ ವೀಕ್ಷಣೆಗೆ ಬರುವ ಬರುವ ವಿದೇಶಿ ಪ್ರವಾಸಿಗರ ಸಂಖ್ಯೆ ವರ್ಷದಿಂದ ವರ್ಷಕ್ಕೆ ಇಳಿಮುಖವಾಗುತ್ತಿದ್ದು, ಪ್ರವಾಸೋದ್ಯಮದ ಅಭಿವೃದ್ಧಿಗೆ ಹಿನ್ನಡೆ ಆಗುವ ಆತಂಕ ಎದುರಾಗಿದೆ.
ಮೈಸೂರು ಅರಮನೆಗೆ ಕಳೆದ 5 ವರ್ಷಗಳಿಂದ ವಿದೇಶಿ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯವಾಗಿ ಇಳಿಮುಖವಾಗಿದ್ದು, ಪ್ರವಾಸೋದ್ಯಮವನ್ನೇ ನಂಬಿ ಬದುಕುವ ಇಲ್ಲಿನ ವ್ಯಾಪಾರಿಗಳು, ಗೈಡ್ಗಳು, ಟ್ರಾವೆಲ್ ಕಂಪನಿ ಏಜೆಂಟರು, ಹೋಟೆಲ್ ಮಾಲೀಕರು ಸೇರಿದಂತೆ ಹಲವರಿಗೆ ಈಗ ಆತಂಕ ಎದುರಾಗಿದೆ.
ಮುಖ್ಯವಾಗಿ ನೋಟ್ ಬ್ಯಾನ್ ಆದ ನಂತರ ಹೆಚ್ಚಾಗಿ ವಿದೇಶಿ ಪ್ರವಾಸಿಗರು ಮೈಸೂರಿಗೆ ಬರುವುದು ಕಡಿಮೆ ಆಗಿದೆ. ಜೊತೆಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮೈಸೂರಿನ ಪ್ರವಾಸೋದ್ಯಮದ ಪ್ರಚಾರ ಇಲ್ಲ ಹಾಗೂ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ಇಲ್ಲಿ ಇಲ್ಲ. ಆದ್ದರಿಂದ ಹೆಚ್ಚಾಗಿ ವಿದೇಶಿ ಪ್ರವಾಸಿಗರು ಕೇರಳ ಹಾಗೂ ಗೋವಾಗೆ ಬಂದು ಹೊರಟು ಹೋಗುತ್ತಾರೆ. ಅಂತರ್ ರಾಜ್ಯ ವಾಹನಗಳಿಗೆ ಪ್ರವೇಶ ತೆರಿಗೆಯನ್ನು ಹೆಚ್ಚಿಸಿರುವುದು ಪ್ರಮುಖ ಕಾರಣಗಳಲ್ಲಿ ಒಂದು ಎನ್ನುತ್ತಾರೆ ಸ್ಥಳೀಯರು.