ಮೈಸೂರು: ದೇವರಾಜ ಮಾರುಕಟ್ಟೆಯ ಹೂವಿನ ಮಾರುಕಟ್ಟೆಯನ್ನು ಜೆ. ಕೆ. ಮೈದಾನಕ್ಕೆ ಸ್ಥಳಾಂತರಿಸುವ ಬಗ್ಗೆ ಒಂದೆರಡು ದಿನಗಳಲ್ಲಿ ಆದೇಶ ಹೊರಡಿಸಲಾಗುವುದು ಎಂದು ಮೈಸೂರು ಮಹಾನಗರ ಪಾಲಿಕೆಯ ಆಯುಕ್ತ ಗುರುದತ್ ಹೆಗಡೆ ತಿಳಿಸಿದರು.
ಜೆ. ಕೆ. ಮೈದಾನಕ್ಕೆ ಹೂವಿನ ಮಾರುಕಟ್ಟೆ ಸ್ಥಳಾಂತರ, ಇನ್ನೆರಡು ದಿನಗಳಲ್ಲಿ ಆದೇಶ ಹೊರಡಿಸಲಾಗುವುದು ಎಂದ ಪಾಲಿಕೆ ಆಯುಕ್ತ - Mysore News
ಮೈಸೂರು ದೇವರಾಜ ಮಾರುಕಟ್ಟೆಯ ಹೂವಿನ ಮಾರುಕಟ್ಟೆಯನ್ನು ಜೆ. ಕೆ. ಮೈದಾನಕ್ಕೆ ಸ್ಥಳಾಂತರಿಸುವ ಬಗ್ಗೆ ಒಂದೆರಡು ದಿನಗಳಲ್ಲಿ ಆದೇಶ ಹೊರಡಿಸಲಾಗುವುದು ಎಂದು ಮೈಸೂರು ಮಹಾನಗರ ಪಾಲಿಕೆಯ ಆಯುಕ್ತ ಗುರುದತ್ ಹೆಗಡೆ ತಿಳಿಸಿದರು.
ದೇವರಾಜ ಮಾರುಕಟ್ಟೆಯ ಹೂವಿನ ವ್ಯಾಪಾರ ವಿಭಾಗ ಸ್ಥಳಾಂತರ
ದೇವರಾಜ ಮಾರುಕಟ್ಟೆಯ ಹೂವಿನ ವ್ಯಾಪಾರದ ಸ್ಥಳ ಚಿಕ್ಕದಾಗಿರುವುದರಿಂದ ಗೌರಿ ಗಣೇಶ ಹಬ್ಬದ ಸಂದರ್ಭದಲ್ಲಿ ಜನಸಂದಣಿ ಹೆಚ್ಚಾಗುವ ಸಾಧ್ಯತೆ ಇದೆ. ಹೀಗಾಗಗಿ ತಾತ್ಕಾಲಿಕವಾಗಿ ಕೊರೊನಾ ಸೋಂಕು ಕಡಿಮೆಯಾಗುವವರೆಗೂ ಹೂವಿನ ಮಾರುಕಟ್ಟೆಯನ್ನು ಜೆ. ಕೆ. ಮೈದಾನಕ್ಕೆ ಸ್ಥಳಾಂತರಿಸುವ ಚಿಂತನೆ ಇದೆ. ಆದಷ್ಟು ಬೇಗ ಈ ಸಂಬಂಧ ಆದೇಶ ಹೊರಡಿಸಲಾಗುವುದು ಎಂದು ಮೈಸೂರು ಮಹಾನಗರ ಪಾಲಿಕೆಯ ಆಯುಕ್ತ ಗುರುದತ್ ಹೆಗಡೆ ತಿಳಿಸಿದರು.