ಮೈಸೂರು :ಮಂಗಳವಾರ ಹುಣ್ಣಿಮೆ ಪ್ರಯುಕ್ತ ಶ್ರೀ ನಂಜುಂಡೇಶ್ವರ ದೇಗುಲಕ್ಕೆ ಸ್ವಾಮಿಯ ದರ್ಶನ ಪಡೆಯಲು ರಾಜ್ಯದ ವಿವಿಧ ಭಾಗಗಳಿಂದ ಭಕ್ತರು ಆಗಮಿಸಿದ್ದರು. ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಲು ಭಕ್ತರು ಪರ ಊರುಗಳಿಂದ ಸೋಮವಾರ ರಾತ್ರಿ ಬಂದು ದೇವಾಲಯದ ಕೈಸಾಲೆ ಹಾಗೂ ಆವರಣದಲ್ಲಿ ತಂಗಿದ್ದರು. ಬೆಳಗ್ಗೆ 4.30ರಿಂದಲೇ, ಕಪಿಲಾ ನದಿಯ ಸ್ನಾನಘಟ್ಟದಲ್ಲಿ ಪುಣ್ಯಸ್ನಾನ ಮಾಡಿ ದೇವಾಲಯದ ಮುಂದೆ ಸರತಿ ಸಾಲಿನಲ್ಲಿ ನಿಂತಿದ್ದರು.
ದೇವಾಲಯದ ಆಗಮಿಕರಾದ ನಾಗಚಂದ್ರ ದೀಕ್ಷಿತ್ ನೇತೃತ್ವದಲ್ಲಿ ಸ್ವಾಮಿಗೆ ವಿಶೇಷ ಪೂಜೆ, ಮಹಾ ಮಂಗಳಾರತಿ ಸೇವೆಯ ನಂತರ ಭಕ್ತರ ದರ್ಶನಕ್ಕೆ ಅನುವು ಮಾಡಿಕೊಡಲಾಯಿತು. ದೇವಾಲಯದ ಮುಂಭಾಗ ಭಕ್ತರು ಉರುಳು ಸೇವೆ, ಧೂಪ, ದೀಪದ ಸೇವೆಯಲ್ಲಿ ನಿರತರಾಗಿದ್ದರು.