ಮೈಸೂರು: ಕೋವಿಡ್-19 ಕರ್ತವ್ಯದ ವೇಳೆ ಅಶಿಸ್ತು ಹಾಗೂ ನಿರ್ಲಕ್ಷ್ಯ ತೋರಿದ ಇಬ್ಬರು ಹಿರಿಯ ಕಾರ್ಮಿಕ ನಿರೀಕ್ಷಕರನ್ನು ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ಅವರು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.
ಕರ್ತವ್ಯದಲ್ಲಿ ಅಶಿಸ್ತು: ಇಬ್ಬರು ಅಧಿಕಾರಿಗಳನ್ನು ಅಮಾನತು ಮಾಡಿದ ಮೈಸೂರು ಡಿಸಿ - Mysore DC Order
ವಲಸೆ ಕಾರ್ಮಿಕರನ್ನು ಅವರ ರಾಜ್ಯಗಳಿಗೆ ಕಳುಹಿಸುವಲ್ಲಿ ಅಶಿಸ್ತು ಹಾಗೂ ನಿರ್ಲಕ್ಷ್ಯ ತೋರಿದ್ದ ಇಬ್ಬರು ಕಾರ್ಮಿಕ ನಿರೀಕ್ಷಕರನ್ನು ಅಮಾನತು ಮಾಡಲಾಗಿದೆ.
ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್
ಮೈಸೂರು 1ನೇ ವೃತ್ತದ ಹಿರಿಯ ಕಾರ್ಮಿಕ ನಿರೀಕ್ಷಕ ಆರ್.ರವಿ, ಹಾಗೂ 2ನೇ ವೃತ್ತದ ಹಿರಿಯ ಕಾರ್ಮಿಕ ನಿರೀಕ್ಷಕ ನಿಖಿಲ್ ಚಂದ್ರ ಅಮಾನತುಗೊಂಡ ಅಧಿಕಾರಿಗಳು ಎಂದು ತಿಳಿದು ಬಂದಿದೆ.
ವಲಸೆ ಕಾರ್ಮಿಕರನ್ನು ಅವರವರ ರಾಜ್ಯಗಳಿಗೆ ಕಳುಹಿಸುವ ಜವಾಬ್ದಾರಿಯನ್ನು ಈ ಇಬ್ಬರು ಅಧಿಕಾರಿಗಳಿಗೆ ನೀಡಲಾಗಿತ್ತು. ಆದರೆ, ಇಬ್ಬರು ಕರ್ತವ್ಯದ ವೇಳೆ ಅಶಿಸ್ತು ಹಾಗೂ ನಿರ್ಲಕ್ಷ್ಯ ತೋರಿದ್ದರಿಂದ ಅಮಾನತು ಮಾಡಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.