ಮೈಸೂರು: ಪರಿಸರ ಹೋರಾಟಗಾರ್ತಿ ದಿಶಾ ರವಿ ಬಂಧನ ಕಾನೂನು ಬಾಹಿರ ಕ್ರಮ ಎಂದು ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರಾ ಆಕ್ರೋಶ ವ್ಯಕ್ತಪಡಿಸಿದರು.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸುಪ್ರೀಂಕೋರ್ಟ್ ಪೊಲೀಸ್ ಮ್ಯಾನ್ಯುಯಲ್ ಪ್ರಕಾರ ಕಾನೂನು ಬಾಹಿರವಾಗಿದೆ. 21 ವರ್ಷದ ಯುವತಿಯನ್ನು ರಾಷ್ಟ್ರದ್ರೋಹಿ ಎಂದು ಚಿತ್ರಿಸಿ ಬಂಧನ ಮಾಡಿರುವ ದೆಹಲಿ ಪೊಲೀಸರ ಕ್ರಮ ಖಂಡನೀಯ.
ಮುಂಬೈನಲ್ಲಿ ವಕೀಲರನ್ನು ಬಂಧಿಸಲಾಗುತ್ತಿದೆ. ಸರ್ಕಾರ ಏನು ಅಂತಾ ತಿಳಿದುಕೊಂಡಿದೆ. ಸರ್ವಾಧಿಕಾರಿ ಆಡಳಿತ ಸ್ಥಾಪಿಸಲು ಹೊರಟಿದೆಯಾ? ಎಂದು ಪ್ರಶ್ನಿಸಿದರು. ಕೇಂದ್ರ ಸರ್ಕಾರ ಪ್ರಜಾಪ್ರಭುತ್ವದ ಕಗ್ಗೊಲೆ ಮಾಡುತ್ತಿದೆ. ಸಂವಿಧಾನವನ್ನು ಲೆಕ್ಕಕ್ಕೆ ತೆಗೆದುಕೊಳ್ಳುತ್ತಿಲ್ಲ. ಪೊಲೀಸ್ ವ್ಯವಸ್ಥೆ ದುರ್ಬಳಕೆ ಮಾಡಿಕೊಳ್ಳುತ್ತಿದೆ.