ಮೈಸೂರು:ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಮುಂಜಾಗ್ರತಾ ಕ್ರಮವಾಗಿ ಜನಪ್ರತಿನಿಧಿಗಳು ಗುದ್ದಲಿ ಪೂಜೆ ಮತ್ತು ಉದ್ಘಾಟನಾ ಕಾರ್ಯಕ್ರಮಗಳನ್ನು ಕೈಬಿಡಬೇಕು ಎಂದು ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ಆದೇಶ ಹೊರಡಿಸಿದ್ದಾರೆ.
ಜನಪ್ರತಿನಿಧಿಗಳು ಉದ್ಘಾಟನೆ, ಗುದ್ದಲಿ ಪೂಜೆ ಕಾರ್ಯಕ್ರಮಗಳನ್ನು ಕೈಬಿಡಿ: ಜಿಲ್ಲಾಧಿಕಾರಿ ಆದೇಶ - District collector Abhiram G.shanker
ಮೈಸೂರಿನಲ್ಲಿ ಸೋಂಕಿತರ ಜೊತೆಗೆ ಸಾವಿನ ಸಂಖ್ಯೆಯೂ ಹೆಚ್ಚಾಗುತ್ತಿದೆ. ತೀರಾ ಅನಿವಾರ್ಯ ಹೊರತುಪಡಿಸಿ ಗುದ್ದಲಿ ಪೂಜೆ ಹಾಗೂ ಉದ್ಘಾಟನಾ ಕಾರ್ಯಕ್ರಮಗಳನ್ನು ಕೈಬಿಡಿ ಎಂದು ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್
ಸೋಂಕು ಹರಡಬಾರದು ಎಂಬ ಉದ್ದೇಶದಿಂದ ಈ ಆದೇಶ ಹೊರಡಿಸಲಾಗಿದೆ. ಅನಿವಾರ್ಯ ಪರಿಸ್ಥಿತಿ ಇದ್ದರೆ 20ಜನ ಮೀರದಂತೆ ಕಾರ್ಯಕ್ರಮ ನಡೆಸಿ. ಅನವಶ್ಯಕವಾಗಿ ಗುಂಪು ಸೇರದಂತೆ ಸಾಮಾಜಿಕ ಅಂತರವನ್ನು ಕಾಯ್ದಕೊಳ್ಳಬೇಕು ಎಂದು ಆದೇಶದಲ್ಲಿ ತಿಳಿಸಿದ್ದಾರೆ.