ಮೈಸೂರು:ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಹಿಂದೆ ಬೇಕಾದಷ್ಟು ಯಾತ್ರೆಗಳನ್ನು ಮಾಡಿದ್ದರೂ ಅದಕ್ಕೆ ಏನಂತ ಹೇಳಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪ್ರಶ್ನಿಸಿದರು.
ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ನಾಡದೇವಿಗೆ ಪೂಜೆ ಸಲ್ಲಿಸಿದ ಡಿಕೆ ಶಿವಕುಮಾರ್ ಮೇಕೆದಾಟು ಪಾದಯಾತ್ರೆ ಹಿನ್ನೆಲೆಯಲ್ಲಿ ಇಂದು ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ನಾಡದೇವತೆಗೆ ಪೂಜೆ ಸಲ್ಲಿಸಿದರು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ನಾಯಕರು ಏನೇನೋ ಮಾತನಾಡುತ್ತಿದ್ದಾರೆ. ಅವರಿಗೆ ಒಳ್ಳೆಯದಾಗಲಿ, ರಾಜ್ಯಕ್ಕೂ ಹಿತವಾಗಲಿ ಎಂದು ವ್ಯಂಗ್ಯವಾಡಿದರು.
ಬಿಜೆಪಿಯವರು ಗಿಮಿಕ್ ಅಂತಿದ್ದಾರೆ. ವಾಜಪೇಯಿಯವರ ಕಾಲದಲ್ಲಿ ಅಡ್ವಾಣಿಯವರು ರಥಯಾತ್ರೆ ಮಾಡಿದ್ದರು. ಮಾಜಿ ಪ್ರಧಾನಿ ದೇವೇಗೌಡರು ಅನೇಕ ಪಾದಯಾತ್ರೆ ಮಾಡಿದ್ದಾರೆ. ಅದರಂತೆ ಮಾಜಿ ಸಿಎಂಗಳಾದ ಕುಮಾರಸ್ವಾಮಿ, ಯಡಿಯೂರಪ್ಪ ಯಾತ್ರೆ ಮಾಡ್ತೇವಿ ಎಂದು ಹೇಳಿದ್ದರು. ಇದಕ್ಕೆಲ್ಲ ಏನ್ ಅಂತೀರಾ. ನಾವು ಪಾದಯಾತ್ರೆ ಮಾಡುವಾಗ ಕೊರೊನಾ ಬರುತ್ತೆ, ಚುನಾವಣೆ ವೇಳೆ ಕೊರೊನಾ ಇರಲಿಲ್ವಾ ಎಂದು ವಾಗ್ದಾಳಿ ನಡೆಸಿದರು.
ಒಳ್ಳೆಯ ಕಾರ್ಯ ಮಾಡುವ ಮುನ್ನ ಚಾಮುಂಡೇಶ್ವರಿ ದೇವಿಗೆ ಪೂಜೆ ಸಲ್ಲಿಸಲಾಗಿದೆ. ದುಷ್ಟರ ಸಂಹಾರ ಮಾಡುವ ಶಕ್ತಿ ದೇವಿಗಿದೆ. ಹಿಂದಿನಿಂದ ದೇವಿಯನ್ನು ನಾವು ನಂಬಿಕೊಂಡಿದ್ದೇವೆ. ಹಾಗಾಗಿ ಹೋರಾಟಕ್ಕೂ ಮೊದಲು ದೇವಿಯ ದರ್ಶನ ಮಾಡಿದ್ದೇವೆ ಎಂದರು. ರಾಜ್ಯದ ಹಿತಕ್ಕಾಗಿ ಕಾಂಗ್ರೆಸ್ ಮೇಕೆದಾಟು ಹೋರಾಟ ಹಮ್ಮಿಕೊಂಡಿದೆ. ಕುಡಿಯುವ ನೀರನ್ನು ಜನರಿಗೆ ಕೊಡಬೇಕು ಎಂಬುದೇ ನಮ್ಮ ಉದ್ದೇಶ ಎಂದರು.
ಇದನ್ನೂ ಓದಿ: ಲಾಕ್ಡೌನ್ ಜಾರಿಯಾದರೂ ನಾವು ನಮ್ಮ ಪಾದಯಾತ್ರೆ ನಿಲ್ಲಿಸುವುದಿಲ್ಲ: ಸರ್ಕಾರಕ್ಕೆ ಡಿಕೆಶಿ ಸವಾಲು