ಮೈಸೂರು: ಹುಣಸೂರು ತಾಲೂಕಿನ ಪ್ರವಾಹ ಪೀಡಿತ ಪ್ರದೇಶಗಳಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಭೇಟಿ ನೀಡಿ, ಪರಿಶೀಲನೆ ನಡೆಸಿದರು.
ಹುಣಸೂರು ಪ್ರವಾಹ ಪೀಡಿತ ಪ್ರದೇಶಗಳಿಗೆ ಡಿಕೆಶಿ ಭೇಟಿ! - ಪ್ರವಾಹ ಪೀಡಿತ ಪ್ರದೇಶಕ್ಕೆ ಡಿಕೆಶಿ ಭೇಟಿ
ಹುಣಸೂರು ತಾಲೂಕಿನ ಪ್ರವಾಹ ಪೀಡಿತ ಪ್ರದೇಶಗಳಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಡಿಕೆಶಿ, ಹಿಂದಿನ ಪ್ರವಾಹದ ಸಂದರ್ಭದಲ್ಲಿ ಯಾವ ರೀತಿ ಪರಿಹಾರ ಕೊಡಲಾಗಿತ್ತು ಮತ್ತು ಪ್ರಸ್ತುತ ಪ್ರವಾಹ ಸಂದರ್ಭದಲ್ಲಿ ಯಾವ ರೀತಿಯ ಪರಿಹಾರ ನೀಡಲಿದೆ ಎಂಬುವುದರ ಬಗ್ಗೆ ಅಧ್ಯಯನ ಮಾಡಿ ರಾಜ್ಯ ಸರ್ಕಾರಕ್ಕೆ ವರದಿ ನೀಡಲಾಗುವುದು ಎಂದು ತಿಳಿಸಿದರು.
ಕೆಪಿಸಿಸಿಯಿಂದ ಐದು ತಂಡಗಳನ್ನು ರಚನೆ ಮಾಡಲಾಗಿದೆ. ರಾಜ್ಯದ ಪ್ರವಾಹದ ವರದಿಯನ್ನು ಸರ್ಕಾರಕ್ಕೆ ನೀಡುತ್ತೇವೆ. ಎಬಿಸಿ ಕ್ಯಾಟಗರಿ ಎಂದು ಮನೆಗಳಿಗೆ ಹಣ ನೀಡದೆ, ಮನೆ ಕಳೆದುಕೊಂಡವರಿಗೆ ಮನೆ ಕಟ್ಟಿಸಿಕೊಡುವುದು ಸರ್ಕಾರದ ಕೆಲಸವಾಗಿದೆ. ಇನ್ನೂ ಕಳೆದ ವರ್ಷ ರಾಜ್ಯದಲ್ಲಿ ಭೀಕರ ಪ್ರವಾಹ ಎದುರಾದಾಗ ಪ್ರಧಾನಿ ಮೋದಿ ಅವರು ರಾಜ್ಯದ ಕಡೆ ತಲೆ ಹಾಕಲಿಲ್ಲ ಎಂದು ಹೇಳಿದರು.