ಮೈಸೂರು:ದೇಶದ ಆರ್ಥಿಕ ಅಪರಾಧಗಳ ಬಗ್ಗೆ ಇಲಾಖೆ ಕಾಲ ಕಾಲಕ್ಕೆ ಎಲ್ಲಾ ಪ್ರಕ್ರಿಯೆಗಳನ್ನು ನಡೆಸುತ್ತಿರುತ್ತದೆ. ಇದನ್ನು ಗೆದ್ದು ಬರುವ ಶಕ್ತಿ ಡಿ.ಕೆ.ಶಿವಕುಮಾರ್ ಅವರಿಗೆ ಇದೆ ಎಂದು ವಿಧಾನ ಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ಹೇಳಿದ್ದಾರೆ.
ಎಲ್ಲವನ್ನೂ ಮೀರಿ ಬರುವ ಶಕ್ತಿ ಡಿ.ಕೆ.ಶಿವಕುಮಾರ್ಗೆ ಇದೆ: ಹೆಚ್.ವಿಶ್ವನಾಥ್ - ಡಿ.ಕೆ.ಶಿವಕುಮಾರ್ ಮನೆಯ ಮೇಲೆ ಸಿಬಿಐ ದಾಳಿ
ಡಿ.ಕೆ.ಶಿವಕುಮಾರ್ ಮನೆಯ ಮೇಲೆ ಸಿಬಿಐ ದಾಳಿ ಬಗ್ಗೆ ಪ್ರತಿಕ್ರಿಯಿಸಿದ ಮಾಜಿ ಸಚಿವ ಹಾಗೂ ವಿಧಾನ ಪರಿಷತ್ ಸದಸ್ಯ ಹೆಚ್.ವಿಶ್ವನಾಥ್, ಎಲ್ಲವನ್ನೂ ಮೀರಿ ಬರುವ ಶಕ್ತಿ ಡಿ.ಕೆ.ಶಿವಕುಮಾರ್ಗೆ ಇದೆ ಎಂದರು.
ಇಂದು ಡಿ.ಕೆ.ಶಿವಕುಮಾರ್ ಮನೆಯ ಮೇಲೆ ಸಿಬಿಐ ದಾಳಿ ಬಗ್ಗೆ ಪ್ರತಿಕ್ರಿಯಿಸಿದ ಮಾಜಿ ಸಚಿವ ಹಾಗೂ ವಿಧಾನ ಪರಿಷತ್ ಸದಸ್ಯ ಹೆಚ್.ವಿಶ್ವನಾಥ್, ಈ ದಾಳಿ ಬಗ್ಗೆ ನಾನು ಕಾಮೆಂಟ್ ಮಾಡುವುದಿಲ್ಲ. ಈ ಬಗ್ಗೆ ನನಗೆ ಗೊತ್ತಿಲ್ಲ. ಆದರೆ ಸಿದ್ದರಾಮಯ್ಯ ಈ ಸಿಬಿಐ ದಾಳಿ ರಾಜಕೀಯ ಪ್ರೇರಿತ ಹಾಗೂ ಆಡಳಿತ ಪಕ್ಷದ ನೈತಿಕ ದಿವಾಳಿತನಕ್ಕೆ ಸಾಕ್ಷಿ ಎಂಬ ಬಗ್ಗೆ ಪ್ರತಿಕ್ರಿಯಿಸಿದ ಅವರು, ವಿರೋಧ ಪಕ್ಷದ ನಾಯಕರು ಹೇಳಿದ ತಕ್ಷಣ ಅದು ವೇದ ವಾಕ್ಯ ಅಲ್ಲ.
ದೇಶದ ಆರ್ಥಿಕ ಪರಿಸ್ಥಿತಿಯ ಬಗ್ಗೆ ಹಾಗೂ ದೇಶದ ಆರ್ಥಿಕ ಅಪರಾಧಗಳ ಮೇಲೆ ಕಣ್ಣಿಡಲು ಒಂದು ಇಲಾಖೆ ಇದೆ. ಅದು ಕಾಲ ಕಾಲಕ್ಕೆ ಎಲ್ಲವನ್ನೂ ನಡೆಸುತ್ತಿರುತ್ತದೆ. ಎಲ್ಲವನ್ನೂ ಮೀರಿ ಬರುವ ಶಕ್ತಿ ಡಿ.ಕೆ.ಶಿವಕುಮಾರ್ಗೆ ಇದೆ. ಅವರು ಗೆದ್ದು ಬರುತ್ತಾರೆ. ನಾವೆಲ್ಲಾ ಒಟ್ಟಾಗಿ ಕೆಲಸ ಮಾಡಿದ್ದೇವೆ, ಅವರ ಶಕ್ತಿ ಏನು ಎಂಬುದು ನಮಗೆ ಗೊತ್ತು ಎಂದು ವಿಶ್ವನಾಥ್ ಹೇಳಿದರು.