ಮೈಸೂರು:ಮೈಸೂರು ವಿಶ್ವವಿದ್ಯಾನಿಲಯದಿಂದ ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅವರಿಗೆ ಮರಣೋತ್ತರ ಗೌರವ ಡಾಕ್ಟರೇಟ್ ಪ್ರಶಸ್ತಿಯನ್ನು ಘಟಿಕೋತ್ಸವ ಸಮಾರಂಭದಲ್ಲಿ ಪ್ರದಾನ ಮಾಡಲಾಯಿತು. ಪುನೀತ್ ಅವರ ಪತ್ನಿ ಅಶ್ವಿನಿ ಅವರು ಡಾಕ್ಟರೇಟ್ ಅನ್ನು ಸ್ವೀಕರಿಸಿದ್ದಾರೆ.
ಮೈಸೂರು ವಿಶ್ವವಿದ್ಯಾನಿಲಯದ 102ನೇ ಘಟಿಕೋತ್ಸವದಲ್ಲಿ ಮೂರು ಜನ ಸಾಧಕರಿಗೆ ಡಾಕ್ಟರೇಟ್ ಪ್ರಶಸ್ತಿ ನೀಡಲಾಗಿದೆ. ಅದರಲ್ಲಿ ಇತ್ತೀಚಿಗೆ ಹೃದಯಾಘಾತದಿಂದ ನಿಧನರಾದ ನಟ ಪುನೀತ್ ರಾಜ್‍ಕುಮಾರ್ ಅವರಿಗೆ ಮರಣೋತ್ತರವಾಗಿ ಗೌರವ ಡಾಕ್ಟರೇಟ್ ಅನ್ನು ಪ್ರದಾನ ಮಾಡಲಾಗಿದ್ದು, ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಪ್ರದಾನ ಮಾಡಿದರು.
ಮೈಸೂರು ವಿವಿಯಿಂದ ಅಪ್ಪುಗೆ ಗೌರವ ಡಾಕ್ಟರೇಟ್ ಪ್ರದಾನ ಕ್ರಾಫರ್ಡ್ ಹಾಲ್ನಲ್ಲಿ ನಡೆದ ಘಟಿಕೋತ್ಸವದಲ್ಲಿ ಪುನೀತ್ ರಾಜ್‍ಕುಮಾರ್ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡುವ ಮುನ್ನ ಅವರ ಬಾಲ್ಯದ ಕೆಲವು ನೆನಪುಗಳನ್ನು ಎಲ್ಇಡಿ ಸ್ಕ್ರೀನ್ ನಲ್ಲಿ ಪ್ರದರ್ಶಿಸಲಾಯಿತು. ಡಾಕ್ಟರೇಟ್ ಸ್ವೀಕರಿಸಲು ಆಗಮಿಸಿದ್ದ ವೇಳೆ ಪುನೀತ್ ಅವರ ಪತ್ನಿ ಅಶ್ವಿನಿ ಪುನೀತ್ ರಾಜ್‍ಕುಮಾರ್ ಅವರು ಭಾವುಕರಾದರು.
ಈ ಕಾರ್ಯಕ್ರಮದಲ್ಲಿ ರಾಘವೇಂದ್ರ ರಾಜಕುಮಾರ್ ಹಾಗೂ ಪುನೀತ್ ರಾಜ್‍ಕುಮಾರ್ ಮಗಳು ಹಾಗೂ ಇತರ ಕುಟುಂಬದ ಸದಸ್ಯರು ಪಾಲ್ಗೊಂಡಿದ್ದರು.
ಇದನ್ನೂ ಓದಿ:ಬಾಲಿವುಡ್‌ಗೆ ನಿರ್ದೇಶಕಿಯಾಗಿ ಐಶ್ವರ್ಯಾ ರಜನಿಕಾಂತ್ ಪದಾರ್ಪಣೆ