ಕರ್ನಾಟಕ

karnataka

ETV Bharat / state

ಸಾರ್ವಜನಿಕರ ಹಿತದೃಷ್ಟಿಯಿಂದ ವೈದ್ಯರ ಮುಷ್ಕರ ವಾಪಸ್ - mysore doctor suicide case

ಮೈಸೂರು ಜಿಲ್ಲೆ ನಂಜನಗೂಡು ತಾಲೂಕು ಅಧಿಕಾರಿ ಡಾ.ಎಸ್​.ಆರ್​.ನಾಗೇಂದ್ರ ಆತ್ಮಹತ್ಯೆ ಪ್ರಕರಣ ಸಂಬಂಧಿಸಿದಂತೆ ವೈದ್ಯರು ಸೂಕ್ತ ಕ್ರಮಕ್ಕೆ ಆಗ್ರಹಿಸಿ ಮುಷ್ಕರ ನಡೆಸಲಾಗುತ್ತಿತ್ತು. ಈಗ ಸಾರ್ವಜನಿಕರ ಹಿತದೃಷ್ಟಿಯಿಂದ ಮುಷ್ಕರ ವಾಪಸ್​ ಪಡೆಯಲಾಗಿದೆ.

Doctors strike back in mysore
ವೈದ್ಯರ ಮುಷ್ಕರ ವಾಪಸ್

By

Published : Aug 23, 2020, 5:40 PM IST

ಮೈಸೂರು:ನಂಜನಗೂಡು ತಾಲೂಕು ಅಧಿಕಾರಿ ಡಾ.ಎಸ್.ಆರ್.ನಾಗೇಂದ್ರ ಆತ್ಮಹತ್ಯೆ ಪ್ರಕರಣ ಸಂಬಂಧ 4 ದಿನಗಳಿಂದ ಮುಷ್ಕರ ನಡೆಸುತ್ತಿದ್ದ ವೈದ್ಯರು ಸಾರ್ವಜನಿಕರು ಹಿತದೃಷ್ಟಿಯಿಂದ ಇಂದು ಮುಷ್ಕರ ಹಿಂತೆಗೆದುಕೊಳ್ಳಲಾಗಿದೆ.

ಸಂಘದ ಅಧ್ಯಕ್ಷ ದೇವಿ ಆನಂದ್

ಮೈಸೂರು ಸರ್ಕಾರಿ ವೈದ್ಯರ ಸಂಘದ ಅಧ್ಯಕ್ಷ ದೇವಿ ಆನಂದ್ ಮಾಧ್ಯಮಗಳೊಂದಿಗೆ ಮಾತನಾಡಿ, ತನಿಖೆ ನಂತರ ಅಮಾನತು ಪ್ರಕ್ರಿಯೆ ಆಗಬೇಕು. ಆರೋಗ್ಯ ಇಲಾಖೆ ಅಧಿಕಾರಿಗಳೇ ನೋಡಲ್ ಅಧಿಕಾರಿಗಳಾಗಿ ಕೆಲಸ ಮಾಡಬೇಕು. ಕೆಎಎಸ್, ಐಎಎಸ್ ಅಧಿಕಾರಿಗಳನ್ನು ಕೊರೊನಾ ನೋಡಲ್ ಅಧಿಕಾರಿಗಳಾಗಿ ಮಾಡಬಾರದು ಎಂದು ಒತ್ತಾಯಿಸಿದರು.

ಗುತ್ತಿಗೆ ಆಧಾರದ ಮೇಲೆ ಅರೆಕಾಲಿಕ ವೈದ್ಯಕೀಯ ಸಿಬ್ಬಂದಿ ಹಾಗೂ ಗ್ರೂಪ್ ಡಿ ನೌಕರರನ್ನು ನೇಮಕ ಮಾಡಿಕೊಳ್ಳಬೇಕು. ಪ್ರಕರಣ ವರದಿ ಬರುವವರೆಗೂ ಕಪ್ಪು ಪಟ್ಟಿ ಧರಿಸಿ ಕರ್ತವ್ಯಕ್ಕೆ ಹಾಜರಾಗಲು ನಿರ್ಧಾರ ಮಾಡಲಾಗಿದೆ ಎಂದು ಹೇಳಿದರು.

ABOUT THE AUTHOR

...view details