ಕರ್ನಾಟಕ

karnataka

ETV Bharat / state

ವ್ಯಾಕ್ಸಿನ್ ಹಾಕಿಸಿಕೊಂಡಿದ್ದೇವೆಂದು ನಿರ್ಲಕ್ಷ್ಯ ಮಾಡಬೇಡಿ : ಡಿಸಿ ರೋಹಿಣಿ ಸಿಂಧೂರಿ - DC Rohini Sindhuri news

ಮಾಸ್ಕ್ ಧರಿಸಬೇಕು, ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು, ಆರ್​ಟಿಪಿಸಿಆರ್ ಟೆಸ್ಟ್ ಮಾಡಿಸಿಕೊಳ್ಳಬೇಕು. ಕೊರೊನಾ ವ್ಯಾಕ್ಸಿನ್ ಹಾಕಿಸಿಕೊಳ್ಳಬೇಕು. ಕೊರೊನಾ ಎರಡನೇ ಅಲೆ ತಡೆಯಲು ಸಾರ್ವಜನಿಕರು ಕೈ ಜೋಡಿಸಬೇಕು..

ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಸಾರ್ವಜನಿಕರಿಗೆ ಮನವಿ
ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಸಾರ್ವಜನಿಕರಿಗೆ ಮನವಿ

By

Published : Mar 19, 2021, 9:42 PM IST

ಮೈಸೂರು :ಕೊರೊನಾ ತಡೆ ವ್ಯಾಕ್ಸಿನ್ ಹಾಕಿಸಿಕೊಂಡಿದ್ದೇವೆಂದು ನಿರ್ಲಕ್ಷ್ಯ ಮಾಡಬಾರದು ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ.

ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಸಾರ್ವಜನಿಕರಿಗೆ ಮನವಿ

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೊರೊನಾ ವ್ಯಾಕ್ಸಿನ್ ಹಾಕಿಸಿಕೊಂಡರೆ ಕೊರೊನಾ ಸೋಂಕು ತಗುಲುವುದಿಲ್ಲ ಎಂದು ಭಾವಿಸಬಾರದು. ವ್ಯಾಕ್ಸಿನ್ ಹಾಕಿಸಿಕೊಂಡರೆ ಸೋಂಕಿನಿಂದ ಬಾಧಿತವಾಗುವುದು ಕಡಿಮೆಯಾಗಲಿದೆ ಅಷ್ಟೇ ಎಂದರು.

ಈಗಾಗಲೇ ಮಹಾರಾಷ್ಟ್ರದಲ್ಲಿ ಕೊರೊ‌ನಾ 2ನೇ ಅಲೆ ಬಂದಿರುವುದನ್ನು ಘೋಷಿಸಲಾಗಿದೆ. ನಮ್ಮ ರಾಜ್ಯದಲ್ಲೂ ಕೊರೊ‌ನಾ 2ನೇ ಅಲೆಯ ಆತಂಕ ಎದುರಾಗಿದೆ. ಹಾಗಾಗಿ, ಕಳೆದ ಬಾರಿಯಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ. ಕೊರೊನಾ ತಡೆಗಾಗಿ ಜನರು ಸಹಕರಿಸಬೇಕು ಎಂದರು.

ಓದಿ:ನಾವು ಸಮ್ಮಿಶ್ರ ಸರ್ಕಾರ ಬೀಳಿಸಿದ ಕಾರಣ ನಮ್ಮನ್ನು ಟಾರ್ಗೆಟ್ ಮಾಡಲಾಗಿದೆ : ಎಸ್.ಟಿ.ಸೋಮಶೇಖರ್

ಮಾಸ್ಕ್ ಧರಿಸಬೇಕು, ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು, ಆರ್​ಟಿಪಿಸಿಆರ್ ಟೆಸ್ಟ್ ಮಾಡಿಸಿಕೊಳ್ಳಬೇಕು. ಕೊರೊನಾ ವ್ಯಾಕ್ಸಿನ್ ಹಾಕಿಸಿಕೊಳ್ಳಬೇಕು. ಕೊರೊನಾ ಎರಡನೇ ಅಲೆ ತಡೆಯಲು ಸಾರ್ವಜನಿಕರು ಕೈ ಜೋಡಿಸಬೇಕು ಎಂದರು.

ABOUT THE AUTHOR

...view details