ಮೈಸೂರು:ಪ್ರಸ್ತುತ ರಾಜಕೀಯ ಬೆಳವಣಿಗೆಗಳಜಂಜಾಟದಿಂದ ಮನನೊಂದು ರಾಜಕೀಯ ನೈಪಥ್ಯದಿಂದ ದೂರ ಉಳಿಯಬೇಕು ಎಂದು ಅನರ್ಹ ಶಾಸಕ ಹೆಚ್.ವಿಶ್ವನಾಥ್ ಅವರು ಘೋಷಿಸಿದ್ದಾರೆ. ಆದರೆ, ಅವರ ಅಭಿಮಾನಿಗಳು ಮತ್ತೆ ರಾಜಕಾರಣದಲ್ಲಿ ಸ್ವಚ್ಛಂದವಾಗಿ ಹಾರಾಡಬೇಕು ಎಂದು ಒತ್ತಾಯಿಸಿದ್ದಾರೆ.
ಹುಣಸೂರು ತಾಲ್ಲೂಕಿನ ಐ.ಕೆ.ರಸ್ತೆಯಲ್ಲಿರುವ ವಿಶ್ವನಾಥ್ ಅವರ ನಿವಾಸದ ಸಮೀಪದಲ್ಲಿ ನಡೆಸಿದ ಸಭೆಯಲ್ಲಿ ರಾಜಕೀಯ ನಿವೃತ್ತಿ ತೆಗೆದುಕೊಳ್ಳಬೇಡಿ ಎಂದು ಒತ್ತಾಯಿಸಿದ ಅಭಿಮಾನಿಗಳು ಹಾಗೂ ಹಿತೈಷಿಗಳು, ನಿಮ್ಮೊಂದಿಗೆ ನಾವಿದ್ದೇವೆ ಎಂದು ಅಭಯ ನೀಡಿದ್ದಾರೆ.