ಕರ್ನಾಟಕ

karnataka

ETV Bharat / state

ಮೈಸೂರು: ವರದಕ್ಷಿಣೆ ಕಿರುಕುಳ ತಾಳಲಾರದೆ ಗೃಹಿಣಿ ನೇಣಿಗೆ ಶರಣು - ವರದಕ್ಷಿಣೆ ಕಿರುಕುಳ ಗೃಹಿಣಿ ನೇಣಿಗೆ ಶರಣು

ಮೈಸೂರು ತಾಲೂಕಿನ ಕೋಟೆಹುಂಡಿ ಗ್ರಾಮದಲ್ಲಿ ವರದಕ್ಷಿಣೆ ಕಿರುಕುಳ ತಾಳಲಾರದೆ ಗೃಹಿಣಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.

housewife suicide in Mysore
ಗೃಹಿಣಿ ಆತ್ಮಹತ್ಯೆ

By

Published : May 30, 2021, 8:07 AM IST

ಮೈಸೂರು: ವರದಕ್ಷಿಣೆ ಕಿರುಕುಳ ತಾಳಲಾರದೆ ಮನನೊಂದು ಗೃಹಿಣಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ತಾಲೂಕಿನ ಕೋಟೆಹುಂಡಿ ಗ್ರಾಮದಲ್ಲಿ ನಡೆದಿದೆ.

ಹರ್ಷಿತ(20) ಮೃತ ದುರ್ದೈವಿ. ದೇವಯ್ಯನಹುಂಡಿ ಗ್ರಾಮದ ಹರ್ಷಿತಳನ್ನು ಕೋಟೆಹುಂಡಿ ಗ್ರಾಮದ ರಾಘವೇಂದ್ರ ಎಂಬಾತನೊಂದಿಗೆ 3 ವರ್ಷದ ಹಿಂದೆ ಸಾಕಷ್ಟು ವರದಕ್ಷಿಣೆ ನೀಡಿ ಮದುವೆ ಮಾಡಿಕೊಡಲಾಗಿತ್ತು.

ನಂತರವೂ ವರದಕ್ಷಿಣೆಗಾಗಿ ಪತಿ ರಾಘವೇಂದ್ರ ಹಾಗೂ ಅತ್ತೆ, ಮಾವ, ನಾದಿನಿ ಕಿರುಕುಳ ನೀಡುತ್ತಿದ್ದರು ಎನ್ನಲಾಗಿದೆ. ಕಿರುಕುಳ ತಾಳಲಾರದೆ ಹರ್ಷಿತ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ಮಹಿಳೆಯ ಮನೆಯವರು ಆರೋಪಿಸಿದ್ದಾರೆ. ಪತಿ ರಾಘವೇಂದ್ರ, ಅತ್ತೆ, ಮಾವ ಹಾಗೂ ನಾದಿನಿಯನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ‌. ಈ ಸಂಬಂಧ ಜಯಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ‌.

ABOUT THE AUTHOR

...view details