ಮೈಸೂರು: ಕೊರೊನಾ ಸೋಂಕು ಹೆಚ್ಚಳವಾಗುತ್ತಿರುವುದಿಂದ ಮೈಸೂರು ನಗರ ಹಾಗು ತಾಲೂಕು ವ್ಯಾಪ್ತಿಯಲ್ಲಿನ ಎಲ್ಲ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳಲ್ಲಿ ವಸತಿ ಶಾಲೆಗಳನ್ನೊಳಗೊಂಡಂತೆ ಅಂಗನವಾಡಿ, ನರ್ಸರಿ, 1ರಿಂದ 10ನೇ ತರಗತಿಯವರೆಗೆ ಭೌತಿಕ ತರಗತಿಗಳನ್ನು ನಾಳೆ(ಜ. 12ರಿಂದ) ಸ್ಥಗಿತಗೊಳಿಸಲು ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್ ಆದೇಶ ಹೊರಡಿಸಿದ್ದಾರೆ.
ಹೆಚ್ಚಿದ ಕೋವಿಡ್ ಆತಂಕ.. ನಾಳೆಯಿಂದ ಮೈಸೂರು ನಗರ, ತಾಲೂಕಲ್ಲಿ ಶಾಲೆಗಳು ಬಂದ್ - ಮೈಸೂರಿನಲ್ಲಿ ಕೊರೊನಾ ಹೆಚ್ಚಳ
ಮೈಸೂರು ನಗರ ಮತ್ತು ತಾಲೂಕಿನಲ್ಲಿ ಶಾಲೆಗಳನ್ನು ಬಂದ್ ಮಾಡುವಂತೆ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಜಿಲ್ಲೆಯ ಉಳಿದ ತಾಲೂಕುಗಳಲ್ಲಿ ಕಡ್ಡಾಯವಾಗಿ ಕೋವಿಡ್ ನಿಯಮಗಳನ್ನು ಪಾಲನೆ ಮಾಡುತ್ತಾ ಭೌತಿಕ ತರಗತಿಗಳನ್ನು ಮುಂದುವರೆಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್ ಆದೇಶ
ಇದು ಮುಂದಿನ ಆದೇಶದವರೆಗೆ ಚಾಲ್ತಿಯಲ್ಲಿರುತ್ತದೆ. ಈ ಅವಧಿಯಲ್ಲಿ ಆನ್ಲೈನ್ ತರಗತಿಗಳನ್ನು ನಡೆಸಲು ಅಗತ್ಯ ಕ್ರಮ ಕೈಗೊಳ್ಳಲು ತಿಳಿಸಿದೆ. ಜಿಲ್ಲೆಯ ಉಳಿದ ತಾಲೂಕುಗಳಲ್ಲಿ ಕಡ್ಡಾಯವಾಗಿ ಕೋವಿಡ್ ನಿಯಮಗಳನ್ನು ಪಾಲನೆ ಮಾಡುತ್ತಾ ಭೌತಿಕ ತರಗತಿಗಳನ್ನು ಮುಂದುವರೆಸಲಾಗುವುದು ಎಂದು ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಓದಿ:ಆಸ್ತಿಯ ಮೂಲ ವಿವರಗಳನ್ನು ತಿಳಿಯಲು ಸರ್ಕಾರದಿಂದ 'ದಿಶಾಂಕ್ ಆ್ಯಪ್ ' : ಇದರ ಪ್ರಯೋಜನಗಳೇನು?
Last Updated : Jan 12, 2022, 6:36 AM IST
TAGGED:
ಮೈಸೂರಿನಲ್ಲಿ ಕೊರೊನಾ ಹೆಚ್ಚಳ