ಮೈಸೂರು: ನಗರದ ನೂತನ ಪೊಲೀಸ್ ಆಯುಕ್ತರಾಗಿ ಡಾ. ಚಂದ್ರಗುಪ್ತ ಶನಿವಾರ ಅಧಿಕಾರ ಸ್ವೀಕರಿಸಿದರು.
ನಜರ್ಬಾದ್ನಲ್ಲಿರುವ ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಕಮಿಷನರ್ ಆಗಿ ಕಾರ್ಯನಿರ್ವಹಿಸಿ ಪೊಲೀಸ್ ನೇಮಕಾತಿ ಮತ್ತು ತರಬೇತಿ ವಿಭಾಗದ ಡಿಐಜಿ ಆಗಿ ವರ್ಗಾವಣೆಗೊಂಡಿರುವ ಕೆ.ಟಿ.ಬಾಲಕೃಷ್ಞ ಅವರಿಂದ ಡಾ. ಚಂದ್ರಗುಪ್ತ ಅಧಿಕಾರ ಸ್ವೀಕರಿಸಿದರು. 2006ರ ಐಪಿಎಸ್ ಬ್ಯಾಚ್ನ ಅಧಿಕಾರಿಯಾಗಿರುವ ಚಂದ್ರಗುಪ್ತ, ಬಂಧೀಖಾನೆ ವಿಭಾಗದ ಡಿಐಜಿಯಾಗಿ ಕಾರ್ಯನಿರ್ವಹಿಸುತ್ತಿದ್ದರು.