ಮೈಸೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಮನೆ ಮೇಲೆ ನಡೆದ ಸಿಬಿಐ ದಾಳಿ ಪೂರ್ವ ನಿಯೋಜಿತವಾದದ್ದು ಎಂದು ವರುಣಾ ಕ್ಷೇತ್ರದ ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ ಆರೋಪಿಸಿದರು.
ಡಿ.ಕೆ. ಶಿವಕುಮಾರ್ ಮನೆ ಮೇಲೆ ಸಿಬಿಐ ದಾಳಿ ಪೂರ್ವನಿಯೋಜಿತ: ಡಾ. ಯತೀಂದ್ರ ಸಿದ್ದರಾಮಯ್ಯ - ಮೈಸೂರು ಸುದ್ದಿ
ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಸರ್ಕಾರಿ ಇಲಾಖೆಗಳ ಮೇಲೆ ಹಿಡಿತ ಸಾಧಿಸುತ್ತಿದೆ. ಚುನಾವಣೆ ಸಮಯದಲ್ಲಿ ಕಾಂಗ್ರೆಸ್ ಶಾಸಕರ ಮನೆ ಮೇಲೆ ದಾಳಿ ನಡೆಸುತ್ತಿದೆ ಎಂದು ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ ಆರೋಪಿಸಿದರು.
ವರುಣಾ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಹೆಳವರಹುಂಡಿ ಮತ್ತು ಹುಣಸೂರು ಗ್ರಾಮದಲ್ಲಿ ನಡೆದ ಗುದ್ದಲಿಪೂಜೆ ಕಾರ್ಯಕ್ರಮ ನೆರವೇರಿಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಸರ್ಕಾರಿ ಇಲಾಖೆಗಳ ಮೇಲೆ ಹಿಡಿತ ಸಾಧಿಸುತ್ತಿದೆ. ಚುನಾವಣೆ ಸಮಯದಲ್ಲಿ ಕಾಂಗ್ರೆಸ್ ಶಾಸಕರ ಮನೆ ಮೇಲೆ ದಾಳಿ ನಡೆಸುತ್ತಿದೆ. ಸಿಬಿಐ ದಾಳಿಯಿಂದ ಕಾಂಗ್ರೆಸ್ ನಾಯಕರನ್ನು ಹೆದರಿಸುವ ಕೆಲಸ ಮಾಡುತ್ತಿದೆ. ನಾವು ಯಾವುದೇ ಕಾರಣಕ್ಕೂ ಹೆದರುವುದಿಲ್ಲ ಎಂದರು.
ಪಕ್ಷದ ಮುಖಂಡರು ಡಿ.ಕೆ. ಶಿವಕುಮಾರ್ ಅವರಿಗೆ ಧೈರ್ಯ ತುಂಬುವ ಕೆಲಸ ಮಾಡುತ್ತಿದ್ದಾರೆ. ಎರಡೂ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಗೆಲ್ಲಲಿದೆ ಎಂದು ಯತೀಂದ್ರ ವಿಶ್ವಾಸ ವ್ಯಕ್ತಪಡಿಸಿದರು.