ಕರ್ನಾಟಕ

karnataka

ETV Bharat / state

ಮೈಸೂರಿನಲ್ಲಿ ಇಂದು ಮೋಡ ಬಿತ್ತನೆ ಕಾರ್ಯಕ್ಕೆ ಚಾಲನೆ - undefined

ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟ ಹಿನ್ನೆಲೆಯಲ್ಲಿ ಉಂಟಾಗಿರುವ ಬರ ಪರಿಸ್ಥಿತಿಯನ್ನು ಎದುರಿಸಲು ಸರ್ಕಾರದಿಂದ ಇಂದು ಮೈಸೂರಿನಲ್ಲಿ ಮೋಡ ಬಿತ್ತನೆ ಕಾರ್ಯ ನಡೆಯಲಿದೆ.

ಮೈಸೂರಿನಲ್ಲಿ ಇಂದು ಮೋಡ ಬಿತ್ತನೆ ಕಾರ್ಯಕ್ಕೆ ಚಾಲನೆ

By

Published : Jul 26, 2019, 1:01 PM IST

ಮೈಸೂರು:ರಾಜ್ಯದಲ್ಲಿ ಉಂಟಾಗಿರುವ ಬರ ನಿರ್ವಹಣೆಯನ್ನು ಎದುರಿಸಲು ಇಂದು ಮೈಸೂರಿನಲ್ಲಿ ಮೋಡ ಬಿತ್ತನೆ ಆರಂಭಿಸಲಾಗುತ್ತಿದೆ.

ಮೈಸೂರಿನಲ್ಲಿ ಇಂದು ಮೋಡ ಬಿತ್ತನೆ ಕಾರ್ಯಕ್ಕೆ ಚಾಲನೆ

ರಾಜ್ಯದಲ್ಲಿ ಮುಂಗಾರು ಮಳೆ ಕೈ ಕೊಟ್ಟಿರುವ ಹಿನ್ನೆಲೆಯಲ್ಲಿ ಉಂಟಾಗಿರುವ ಬರ ಪರಿಸ್ಥಿತಿಯನ್ನು ಎದುರಿಸಲು ಸರ್ಕಾರ ಇಂದು ಮೈಸೂರಿನಲ್ಲಿ ಮೋಡ ಬಿತ್ತನೆ ಕಾರ್ಯ ನಡೆಸಲಿದೆ ಎಂದು ಗ್ರಾಮೀಣ ಮತ್ತು ಪಂಚಾಯತ್ ರಾಜ್ ಮುಖ್ಯ ಇಂಜಿನಿಯರ್ ಪ್ರಕಾಶ್ ಕುಮಾರ್ ಖಚಿತಪಡಿಸಿದ್ದಾರೆ.

ಮೈಸೂರು ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್​ನಲ್ಲಿ ಬಂದು ಈ ಭಾಗದಲ್ಲಿ ಹೆಚ್ಚಾಗಿ ಮೋಡ ಒಟ್ಟುಗೂಡಿರುತ್ತವೆ ಎಂಬುದನ್ನು ನೋಡಿ ಮೋಡ ಬಿತ್ತನೆ ಮಾಡಲಾಗುವುದು ಎಂದು ತಿಳಿಸಿದರು.

ಈ ಮೋಡ ಬಿತ್ತನೆಗೆ ಕ್ಯಾಲ್ಷಿಯಂ ಫ್ಲೋರೈಡ್ ಅಂಶವನ್ನು ಬಳಸಲಾಗುವುದು ಎಂದು ಪ್ರಕಾಶ್ ಕುಮಾರ್ ಇದೇ ವೇಳೆ ತಿಳಿಸಿದರು.

ಗುರುವಾರ ಬೆಂಗಳೂರಿನಲ್ಲಿ ಮೋಡ ಬಿತ್ತನೆ: ಗುರುವಾರ ಪ್ರಾಯೋಗಿಕವಾಗಿ ಬೆಂಗಳೂರಿನ ಹೆಚ್.ಎ.ಎಲ್ ವಿಮಾನ ನಿಲ್ದಾಣದಿಂದ ಎರಡು ವಿಮಾನಗಳ ಮೂಲಕ ಮೋಡ ಬಿತ್ತನೆ ನಡೆಸಲಾಯಿತು.‌ ಈ ವಿಮಾನಗಳು ಕನಕಪುರ ಚಾಮರಾಜನಗರ ಹಾಗೂ ದಕ್ಷಿಣ ಕರ್ನಾಟಕದ ಸುತ್ತಮುತ್ತ 1 ವಿಮಾನ ಮೋಡ ಬಿತ್ತನೆ ಮಾಡಿದರೆ, ಮತ್ತೊಂದು ವಿಮಾನ ಕೋಲಾರ ಜಿಲ್ಲೆ ವ್ಯಾಪ್ತಿಯ ಪ್ರದೇಶಗಳಲ್ಲಿ ಸುಮಾರು ನಿನ್ನೆ ಸಂಜೆ 4:30 ರಿಂದ 5:25 ರವರೆಗೆ ಮೋಡ ಬಿತ್ತನೆ ಮಾಡಲಾಗಿತ್ತು.

ಮೊದಲಿಗೆ ಮೈಸೂರಿನಲ್ಲಿ ಮೋಡ ಬಿತ್ತನೆಗೆ ಉದ್ದೇಶಿಸಲಾಗಿದ್ದರೂ ಪ್ರಾಯೋಗಿಕವಾಗಿ ನಿನ್ನೆ ಬೆಂಗಳೂರಿನಲ್ಲಿ ಮೋಡ ಬಿತ್ತನೆಯನ್ನು ನಡೆಸಲಾಯಿತು ಎಂದು ಡಿ.ಆರ್.ಟಿ.ಆರ್. ಮುಖ್ಯ ಇಂಜಿನಿಯರ್ ಪ್ರಕಾಶ್ ಕುಮಾರ್ ತಿಳಿಸಿದರು.

For All Latest Updates

TAGGED:

ABOUT THE AUTHOR

...view details