ಮೈಸೂರು: ಮಾದಕ ವಸ್ತು ಮಾರಾಟದಲ್ಲಿ ತೊಡಗಿದ್ದ ಇಬ್ಬರು ಆರೋಪಿಗಳನ್ನು ನಗರ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ 31ಗ್ರಾಂ ಎಂಡಿಎಂಎ, ಎಕ್ಟೆಸಿ ಟ್ಯಾಬ್ಲೆಟ್, ಎಲ್ಎಸ್ಡಿ ಡ್ರಗ್ಸ್, 5000 ರೂ. ಹಣ, ಎರಡು ಮೊಬೈಲ್ ಮತ್ತು ಬೈಕ್ ವಶಪಡಿಸಿಕೊಳ್ಳಲಾಗಿದೆ.
ಬಂಧಿತರಲ್ಲಿ ಒಬ್ಬಾತ ಅಂತಿಮ ವರ್ಷದ ಕಾನೂನು ವಿದ್ಯಾರ್ಥಿಯಾಗಿದ್ದು, ಮತ್ತೊಬ್ಬ ವಕೀಲ ವೃತ್ತಿಯಲ್ಲಿ ಇದ್ದ ಎಂದು ವಿಚಾರಣೆ ವೇಳೆ ತಿಳಿದು ಬಂದಿದೆ. ಇವರಿಬ್ಬರು ಡಿ.23 ರಂದು ಕುವೆಂಪುನಗರ ಪೊಲೀಸ್ ಠಾಣಾ ವ್ಯಾಪ್ತಿಯ ಕೆ.ಬ್ಲಾಕ್ ಆದಿಚುಂಚನಗಿರಿ ರಸ್ತೆಯಲ್ಲಿ ಗಿರಾಕಿಗಳನ್ನು ಬರಮಾಡಿಕೊಂಡು ಮಾದಕ ವಸ್ತುಗಳನ್ನು ಮಾರಾಟ ಮಾಡಿ ಅಕ್ರಮ ಹಣ ಸಂಪಾದನೆಯಲ್ಲಿ ತೊಡಗಿದ್ದರು. ಈ ವೇಳೆ, ಪೊಲೀಸರ ಬಲೆಗೆ ಬಿದ್ದಿದ್ದಾರೆ.