ಕರ್ನಾಟಕ

karnataka

ETV Bharat / state

ದಸರಾ ಉದ್ಘಾಟನಾ ಕಾರ್ಯಕ್ರಮ ಸಾರ್ವಜನಿಕರಿಗೆ ಮುಕ್ತ ಅವಕಾಶ.. ಸಚಿವ ಸೋಮಶೇಖರ್ - ರಾಷ್ಟ್ರಪತಿಗಳ ಕಚೇರಿ ಸೂಚನೆಯಂತೆ ಸಿದ್ಧತೆ

ಭದ್ರತೆ ಕುರಿತು ಅಧಿಕಾರಿಗಳಿಗೆ ರಾಷ್ಟ್ರಪತಿಗಳ ಕಚೇರಿ ಸೂಚನೆಯಂತೆ ಸಿದ್ಧತೆ ಮಾಡಲು ಸೂಚಿಸಿದ್ದೇನೆ. ಸೂಕ್ತ ರೀತಿಯಲ್ಲಿ ಭದ್ರತೆ ವ್ಯವಸ್ಥೆ ಮಾಡಲಾಗುವುದು ಎಂದು ಸೋಮಶೇಖರ್​ ತಿಳಿಸಿದರು.

Minister ST Somashekhar inspected the preparations at Chamundi Hill
ಸಚಿವ ಎಸ್.ಟಿ ಸೋಮಶೇಖರ್ ಚಾಮುಂಡಿ ಬೆಟ್ಟದಲ್ಲಿ ಸಿದ್ಧತೆ ಪರಿಶೀಲಿಸಿದರು

By

Published : Sep 18, 2022, 3:38 PM IST

ಮೈಸೂರು: ದಸರಾ ಉದ್ಘಾಟನಾ ಕಾರ್ಯಕ್ರಮಕ್ಕೆ ಸೆ.26 ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಆಗಮಿಸಲಿದ್ದು, ಈ ಸಂಬಂಧ ಸಹಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ಅಲ್ಲಿ ನಡೆಯುತ್ತಿರುವ ಸಿದ್ಧತೆಯನ್ನು ಪರಿಶೀಲಿಸಿದರು.

ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸ್ಥಳದ ಲಭ್ಯತೆಗನುಗುಣವಾಗಿ ಸಾರ್ವಜನಿಕರಿಗೆ ಆಸನದ ವ್ಯವಸ್ಥೆ ಮಾಡಲಾಗುತ್ತಿದೆ. 1500-2000 ಜನರು ಸೇರುವಷ್ಟು ಸ್ಥಳವಕಾಶವಿದ್ದು, ದೇವಸ್ಥಾನಕ್ಕೆ ಆಗಮಿಸುವ ಭಕ್ತರೆಲ್ಲರಿಗೂ ದಸರಾ ಉದ್ಘಾಟನಾ ಕಾರ್ಯಕ್ರಮ ವೀಕ್ಷಿಸಲು ಮುಕ್ತ ಅವಕಾಶವಿದೆ ಎಂದು ಹೇಳಿದರು.

ದಸರಾ ಉದ್ಘಾಟನೆಗೆ ರಾಷ್ಟ್ರಪತಿ ಆಗಮಿಸುವ ಹಿನ್ನೆಲೆಯಲ್ಲಿ ಚಾಮುಂಡಿ ಬೆಟ್ಟ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸುತ್ತಿದ್ದೇನೆ. ಕಾರ್ಯಕ್ರಮದ ವೇದಿಕೆ ಸಿದ್ಧತೆ, ಗಣ್ಯರು, ಸಾರ್ವಜನಿಕರಿಗೆ ಆಸನದ ವ್ಯವಸ್ಥೆ, ಕಾರ್ಯಕ್ರಮ ವೀಕ್ಷಣೆ, ಭದ್ರತೆ ಕುರಿತು ಅಧಿಕಾರಿಗಳಿಗೆ ರಾಷ್ಟ್ರಪತಿಗಳ ಕಚೇರಿ ಸೂಚನೆಯಂತೆ ಸಿದ್ಧತೆ ಮಾಡಲು ಹೇಳಿದ್ದೇನೆ. ಸೂಕ್ತ ರೀತಿಯಲ್ಲಿ ಭದ್ರತೆ ವ್ಯವಸ್ಥೆ ಮಾಡಲಾಗುವುದು ಎಂದರು.

ಸಚಿವ ಎಸ್.ಟಿ ಸೋಮಶೇಖರ್ ಚಾಮುಂಡಿ ಬೆಟ್ಟದಲ್ಲಿ ಸಿದ್ಧತೆ ಪರಿಶೀಲಿಸಿದರು

ಈ ಸಂದರ್ಭದಲ್ಲಿ ಸಂಸದ ಪ್ರತಾಪ್ ಸಿಂಹ, ಶಾಸಕ ಜಿ.ಟಿ. ದೇವೇಗೌಡ, ಮೇಯರ್ ಶಿವಕುಮಾರ್, ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್, ಪೊಲೀಸ್ ಕಮಿಷನರ್ ಚಂದ್ರಗುಪ್ತ, ಅಪರ ಜಿಲ್ಲಾಧಿಕಾರಿ ಮಂಜುನಾಥಸ್ವಾಮಿ ಇತರರು ಇದ್ದರು.

ಇದನ್ನೂ ಓದಿ:ರಾಷ್ಟ್ರಪತಿಯಿಂದ ಮೈಸೂರು ದಸರಾ ಉದ್ಘಾಟನೆ.. ಅಪ್ಪುಗೆ ಯುವ ದಸರಾ ಮೀಸಲು

ABOUT THE AUTHOR

...view details