ಮೈಸೂರು:ತುಂಡಾದ ವಿದ್ಯುತ್ ತಂತಿ ತುಳಿದು ಹಸು ಸಾವನ್ನಪ್ಪಿರುವ ಘಟನೆ ಹೆಚ್.ಡಿ.ಕೋಟೆ ತಾಲೂಕಿನ ಸರಗೂರು ಪಟ್ಟಣದಲ್ಲಿ ನಡೆದಿದೆ.
ವಿದ್ಯುತ್ ತಂತಿ ತುಳಿದು ಹಸು ಸಾವು - kannada news
ಮೇಯಲು ಜಮೀನಿಗೆ ಹೋಗಿದ್ದ ಹಸು ತುಂಡಾದ ವಿದ್ಯುತ್ ತಂತಿ ತುಳಿದು ಸಾವನ್ನಪ್ಪಿದ ಘಟನೆ ಜಿಲ್ಲೆಯಲ್ಲಿ ನಡೆದಿದೆ.
ವಿದ್ಯುತ್ ತಂತಿ ತುಳಿದು ಹಸು ಸಾವು
ಜಿಲ್ಲೆಯ ಹೆಚ್.ಡಿ.ಕೋಟೆ ತಾಲೂಕಿನ ಸರಗೂರು ಪಟ್ಟಣದಲ್ಲಿ ಈ ಘಟನೆ ನಡೆದಿದೆ. ರಫೀಕ್ ಎಂಬುವರಿಗೆ ಸೇರಿದ ಹಸು ಮೇಯಲು ಜಮೀನಿಗೆ ಹೋಗಿದ್ದ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಕೆಇಬಿ ಇಲಾಖೆಯ ಅಧಿಕಾರಿಗಳ ನಿರ್ಲಕ್ಷ್ಯದ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ.